ಸಿದ್ಧರಾಮಯ್ಯಗೆ ಕೊರೋನಾ ದೃಢ ಹಿನ್ನೆಲೆ: ಶೀಘ್ರ ಗುಣಮುಖರಾಗಲೇಂದು ಸಚಿವ ಶ್ರೀರಾಮಲು ಹಾರೈಕೆ… ಬೆಂಗಳೂರು,ಆ,4,2020(..): ಜ್ವರದಿಂದ ಬಳಲುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢವಾಗಿದ್ದು ಈ ಹಿನ್ನೆಲೆ ಸಿದ್ಧರಾಮಯ್ಯ ಅವರು ಶೀಘ್ರ ಗುಣಮುಖರಾಗಲಿ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹಾರೈಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ಶ್ರೀರಾಮುಲು, ವಿರೋಧ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ. : – -- - - .