ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಕೊರೋನಾ ಸೋಂಕಿತ ವ್ಯಕ್ತಿ ಪತ್ತೆ…. ಮೈಸೂರು,ಆ,3,2020(..): ಮೈಸೂರನ ಕೋವಿಡ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ಕೊರೋನಾ ಸೋಂಕಿತ ವ್ಯಕ್ತಿ ಇದೀಗ ಪತ್ತೆ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ. 76 ವರ್ಷದ ವೃದ್ದ ಜುಲೈ 23 ರಂದು ಮೈಸೂರಿನ ಮೇಟಗಳ್ಳಿಯ ಕೋವಿಡ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದರು. ವೃದ್ಧ ಮೈಸೂರಿನ ಲಷ್ಕರ್ ಮೊಹಲ್ಲಾ ನಿವಾಸಿಯಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತದ್ದ ಇವರು ಅಲ್ಲಿಂದ ನಾಪತ್ತೆಯಾಗಿದ್ದರು. ಇವರಿಗೆ ಮರವಿನ ಖಾಯಿಲೆ ಇತ್ತು ಎನ್ನಲಾಗಿತ್ತು. ಸೋಂಕಿತ ವೃದ್ಧನಿಗಾಗಿ ಅಂದಿನಿಂದ ಹುಡಕಾಟ ನಡೆಸಲಾಗಿತ್ತು. ಇದೀಗ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಬನ್ನೂರಿನಲ್ಲಿ ಸೋಂಕಿತ ವೃದ್ಧ ಪತ್ತೆಯಾಗಿದ್ದು ಅಧಿಕಾರಿಗಳು ವೃದ್ಧನನ್ನು ಮತ್ತೆ ಕೋವಿಡ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮರೆವಿನ ಖಾಯಿಲೆಯ ತಂದೆ ಪತ್ತೆಯಿಂದಾಗಿ ಮನೆಯವರು ನಿಟ್ಟುಸಿರು ಬಿಟ್ಟಿದ್ದಾರೆ. : - – ---