ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ನೂತನ ಬಿಜೆಪಿ ಪದಾಧಿಕಾರಿಗಳಿಗೆ ಸಚಿವ ಎಸ್.ಟಿ ಸೋಮಶೇಖರ್ ಅಭಿನಂದನೆ… ಬೆಂಗಳೂರು,ಆ,1,2020(..): ನೂತನವಾಗಿ ಆಯ್ಕೆಯಾಗಿರುವ ಬಿಜೆಪಿ ಪದಾಧಿಕಾರಿಗಳಿಗೆ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅಭಿನಂದನೆ ಸಲ್ಲಿಸಿದ್ದಾರೆ. ನೂತನ ಬಿಜೆಪಿ ಪದಾಧಿಕಾರಿಗಳ ನೇಮಕ ಕುರಿತು ಮಾತನಾಡಿರುವ ಸಚಿವ ಎಸ್.ಟಿ ಸೋಮಶೇಖರ್, ಪಕ್ಷ ಸಂಘಟನೆ ದೃಷ್ಟಿಯಿಂದ ಹಾಗೂ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರ ಕೈಗೊಂಡ ಜನಪರ ಯೋಜನೆಗಳನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷದ ದಕ್ಷ ರಾಜ್ಯಾಧ್ಯಕ್ಷರಾದ ಕಟೀಲ್ ಅವರು, ಯುವಕರು, ಹಿರಿಯರು, ಅನುಭವಿಗಳು ಸೇರಿದಂತೆ ಉತ್ತಮವಾದ ಸಂಘಟನಾ ತಂಡವನ್ನು ರಚನೆ ಮಾಡಿದ್ದು, ಅವರಿಗೆ ನಾನು ಮೊದಲು ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಸಂಘಟನೆಗೆ ಸದೃಢ ಮತ್ತು ಕ್ರಿಯಾಶೀಲ ಪದಾಧಿಕಾರಿಗಳಾಗಿ ಆಯ್ಕೆಯಾಗಿರುವ ಎಲ್ಲರಿಗೂ ಕೂಡ ಅಭಿನಂದಿಸುತ್ತೇನೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಪ್ರವಾಹ, ಕೋವಿಡ್ 19 ನಿರ್ವಹಣೆಯಲ್ಲಿ 24×7 ಉಸ್ತುವಾರಿ ಸಚಿವರುಗಳಿಗೆ, ಜನಪ್ರತಿನಿಧಿಗಳಿಗೆ, ಜಿಲ್ಲಾಡಳಿತಕ್ಕೆ ಸಲಹೆ ಸೂಚನೆಗಳು, ಮಾರ್ಗದರ್ಶನ ನೀಡುತ್ತಾ ಅತ್ಯಂತ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೆ, ಕೊರೋನಾ ಹಿನ್ನೆಲೆಯಲ್ಲಿ ರಾಜ್ಯ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದರೂ ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಜೊತೆಗೆ ಕಷ್ಟದಲ್ಲಿರುವ ನಾಗರಿಕರ ಸಹಾಯಕ್ಕೆ ಧಾವಿಸಿ ಕೋಟ್ಯಂತರ ರೂಪಾಯಿ ಪ್ಯಾಕೇಜ್ ಗಳನ್ನು ಘೋಷಿಸಿ ನೆರವಾಗಿದ್ದಾರೆ. ಈ ಮೂಲಕ ಆರ್ಥಿಕ ಚಟುವಟಿಕೆ ನಿಲ್ಲದಂತೆ ನೋಡಿಕೊಂಡು ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಆದರೆ ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿರುವ ವಿಪಕ್ಷಗಳಿಗೆ ನೂತನ ಪದಾಧಿಕಾರಿಗಳು ಪಕ್ಷದ ವೇದಿಕೆಯಲ್ಲಿ ತಕ್ಕ ಮತ್ತು ಸಮರ್ಥ ರೀತಿಯಲ್ಲಿ ಉತ್ತರವನ್ನು ಕೊಡುವ ನಿಟ್ಟಿನಲ್ಲಿ ಅರ್ಹರನ್ನು ನೇಮಕ ಮಾಡಿಕೊಳ್ಳಲಾಗಿದೆ. ವ್ಯಕ್ತಿ ಪೂಜೆಗಿಂತ ಪಕ್ಷದ ಪೂಜೆ ಮುಖ್ಯ ಎಂಬ ನಿಟ್ಟಿನಲ್ಲಿ ಮತ್ತೊಮ್ಮೆ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಸರ್ಕಾರ ರಚನೆಯಾಗಲು, ಪಕ್ಷದ ತಂಡದೊಂದಿಗೆ ನಾವೆಲ್ಲ ಸಚಿವರು ಕಾರ್ಯನಿರ್ವಹಿಸುತ್ತೇವೆಂದು ಹೇಳಲಿಚ್ಚಿಸುತ್ತೇನೆ ಎಂದು ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ. : - - - - – –