ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಅಧಿಕಾರ ಸ್ವೀಕಾರ….. ಬೆಂಗಳೂರು,ಆ,1,2020(..): ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಅಧಿಕಾರ ಸ್ವೀಕರಿಸಿದರು. ಇನ್ ಫ್ಯಾಂಟ್ರಿ ರಸ್ತೆಯಲ್ಲಿರುವ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಮಲ್ ಪಂತ್ ಅವರು ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅಧಿಕಾರ ಹಸ್ತಾಂತರ ಮಾಡಿದರು. ಕಮಲ್ ಪಂತ್ 36ನೇ ಪೊಲೀಸ್ ಆಯುಕ್ತರಾಗಿದ್ದಾರೆ. ಭಾಸ್ಕರ್ ರಾವ್ ಅವರನ್ನ ಆತಂರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಭಾಸ್ಕರ್ ರಾವ್ ಕಳೆದ ಒಂದು ವರ್ಷದಿಂದ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. : – –-