ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 16,95,988 ಕ್ಕೆ ಏರಿಕೆ ನವದೆಹಲಿ,ಅ,1,2020(..): ದೇಶದಲ್ಲಿ ಕೋರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು ದೇಶದ ಕೋವಿಡ್ ಸೋಂಕಿತರ ಸಂಖ್ಯೆ 16,95,988ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 57,117 ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಒಂದೇ ದಿನ ದೇಶದಲ್ಲಿ 764 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೋನಾಗೆ ಮೃತಪಟ್ಟವರ ಸಂಖ್ಯೆ 36,511ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೆ 10,94,374 ಮಂದಿ ಸೋಂಕಿತರು ಗುಣಮುಖರಾಗಿದ್ದು, ಇನ್ನೂ 5,65,103 ಸಕ್ರಿಯ ಪ್ರಕರಣಗಳಿವೆ. ನಿನ್ನೆ ಕರ್ನಾಟಕದಲ್ಲಿ 5483 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿತ್ತು. ಬೆಂಗಳೂರು ನಗರದಲ್ಲಿ 2220, ಬಳ್ಳಾರಿಯಲ್ಲಿ 340, ಉಡುಪಿಯಲ್ಲಿ 213 ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 204 ಹೊಸ ಪ್ರಕರಣಗಳು ಪತ್ತೆಯಾಗಿದ್ದವು. : –- 16,95,988