ಕುತೂಹಲ ಕೆರಳಿಸಿದ ರಾಜಭವನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಅವರ ಭೇಟಿ… ಬೆಂಗಳೂರು,ಜು,31,2020(..): ರಾಜ್ಯದಲ್ಲಿ ಕೊರೋನಾ ಮಹಾಮಾರಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ವಿಧಾನ ಪರಿಷತ್ ಗೆ ನಾಮ ನಿರ್ದೇಶನ ಮಾಡಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಹಾಗೂ ಪುನರಚನೆ ಚರ್ಚೆ ಆರಂಭವಾವಾಗಿದೆ. ಈ ಮಧ್ಯೆ ಬಿಜೆಪಿ ಸರ್ಕಾರದ ಸಂಪುಟ ಸೇರ್ಪಡೆಯಾಗಲು ಬಿಜೆಪಿಯಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದು ಲಾಬಿ ನಡೆಸಲು ಸಜ್ಜಾಗಿದ್ದಾರೆ. ಈ ನಡುವೆ ಸಿಎಂ ಬಿಎಸ್ ಯಡಿಯೂರಪ್ಪ ಇಂದು ರಾಜಭವನಕ್ಕೆ ಭೇಟಿ ನೀಡಿ ರಾಜ್ಯಪಾಲರ ಜತೆ ಚರ್ಚಿಸುತ್ತಿದ್ದಾರೆ. ರಾಜಭವನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ಕುತೂಹಲ ಮೂಡಿಸಿದೆ. ಸಿಎಂ ಬಿಎಸ್ ಯಡಿಯೂರಪ್ಪಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಾಥ್ ನೀಡಿದ್ದು ರಾಜ್ಯಪಾಲರ ಬಳಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸುತ್ತಿರುವ ಸಾಧ್ಯತೆ ಇದೆ. : - - -