ನಾನೂ ಕೂಡ ಸಚಿವ ಸ್ಥಾನ ಆಕಾಂಕ್ಷಿ ಎಂದ ಬಿಜೆಪಿ ಶಾಸಕ.. ಕೊಡಗು,ಜು,31,2020(..): ವಿಧಾನ ಪರಿಷತ್ ಗೆ ಹೆಚ್.ವಿಶ್ವನಾಥ್ , ಸಿಪಿ ಯೋಗೇಶ್ವರ್ ಸೇರಿ ಐದು ಮಂದಿಯನ್ನ ನಾಮನಿರ್ದೇಶನ ಮಾಡಿದ ಬಳಿಕ ರಾಜ್ಯದಲ್ಲಿ ಇದೀಗ ಸಚಿವ ಸಂಪುಟ ವಿಸ್ತರಣೆ ಚರ್ಚೆ ಮುನ್ನಲೆಗೆ ಬಂದಿದೆ. ಆಗಸ್ಟ್ ತಿಂಗಳಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಬಿಎಸ್ ಯಡಿಯೂರಪ್ಪ ಮುಂದಾಗಿದ್ದಾರೆ ಎನ್ನಲಾಗಿದ್ದು ಇದೀಗ ಸಚಿವಾಕಾಂಕ್ಷಿಗಳು ಲಾಬಿ ಮಾಡಲು ಪ್ರಾರಂಭಿಸಿದ್ದಾರೆ. ಅಂತೆಯೇ ಶಾಸಕ ಅಪ್ಪಚ್ಚು ರಂಜನ್ ಸಹ ತಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ. ಈ ಕುರಿತು ಇಂದು ಮಾತನಾಡಿರುವ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್, ನಾನು 5 ಬಾರಿ ಶಾಸಕನಾಗಿದ್ದೇನೆ. ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಪಕ್ಷದ ಹಿರಿಯ ಶಾಸಕರ ಸ್ಥಾನದಲ್ಲಿ ನಾನೂ ಇದ್ದೇನೆ. ನನಗೂ ಅವಕಾಶ ಕೊಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ. : –- -