ಮೆಟ್ರೋ 2ನೇ ಹಂತದ ಎಲ್ಲಾ ಕಾಮಗಾರಿಗಳು ಆರಂಭ: 2024ರ ವೇಳೆಗೆ ಪೂರ್ಣ – ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ… ಬೆಂಗಳೂರು, ಜು,30,2020(..): ಮೆಟ್ರೋ 2ನೇ ಹಂತದ ಎಲ್ಲಾ ಕಾಮಗಾರಿಗಳು ಆರಂಭವಾಗಿದ್ದು, 2024ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. ಇಂದು ಅಬ್ದುಲ್‍ಭಾರಿ ಹೈಸ್ಕೂಲ್ ಮೈದಾನ, ಸುಲ್ತಾನಾ ಗುಂಟಾ, ಶಿವಾಜಿನಗರ ಇಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ ಆಯೋಜಿಸಿದ್ದ ಬೆಂಗಳೂರು ಮೆಟ್ರೋ ಹಂತ-2 ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಿಂದ ಮತ್ತು ಶಿವಾಜಿನಗರ ಮೆಟ್ರೋ ನಿಲ್ದಾಣಗಳ ನಡುವೆ ಸುರಂಗ ಮಾರ್ಗಕ್ಕೆ ಮುಖ್ಯಮಂತ್ರಿ ಶ್ರೀ ‌ಬಿ.ಎಸ್. ಯಡಿಯೂರಪ್ಪ ಅವರು ಚಾಲನೆ ನೀಡಿದರು. ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತಾನಾಡಿದ ಸಿಎಂ ಬಿ.ಎಸ್ ಯಡಿಯೂರಪ್ಪ, ಸಂಚಾರ ದಟ್ಟಣೆ ಕಡಿಮೆ ಮಾಡಲು ಮೆಟ್ರೋ ಸಹಕಾರಿ. ಬೆಂಗಳೂರು ಜಾಗತಿಕವಾಗಿ ಬೆಳೆದಿದೆ. ನಗರದ ರಸ್ತೆಗಳನ್ನ ಸ್ಮಾರ್ಟ್ ಸಿಟಿ ಯೋಜನೆಯಡಿ ಪುನಶ್ಚೇತನ ಮಾಡಲಾಗುತ್ತದೆ. ಮೆಟ್ರೋ ಸುರಂಗ ಮಾರ್ಗ ಕಾಮಗಾರಿಯನ್ನ 4 ಹಂತಗಳಲ್ಲಿ ವಿಂಗಡಣೆ ಮಾಡಲಾಗಿದೆ. ಮೆಟ್ರೋ 2ನೇ ಹಂತದ ಎಲ್ಲಾ ಕಾಮಗಾರಿಗಳು ಆರಂಭವಾಗಿದ್ದು, 2024ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. : - – -2nd - -2024-