ನಮ್ಮ ಬಿಜೆಪಿ ಸರ್ಕಾರಕ್ಕೆ ಹೆಚ್.ಡಿ ಕುಮಾರಸ್ವಾಮಿ ಪರೋಕ್ಷ ಬೆಂಬಲ ನೀಡ್ತಿದ್ದಾರೆ- ಎಂಎಲ್ ಸಿ ಯೋಗೇಶ್ವರ್ ಸ್ಪೋಟಕ ಹೇಳಿಕೆ… ಬೆಂಗಳೂರು,ಜು,30,2020(..): ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಬಿಜೆಪಿ ಸರ್ಕಾರಕ್ಕೆ ಪರೋಕ್ಷವಾಗಿ ಬೆಂಬಲ ನೀಡ್ತಿದ್ದಾರೆ ಎಂದು ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿ.ಪಿ ಯೋಗೇಶ್ವರ್, ಹೆಚ್.ಡಿ ಕುಮಾರಸ್ವಾಮಿ ನಮ್ಮ ಸರ್ಕಾರಕ್ಕೆ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ. ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಡಿಕೆ ಸಹೋದರರು ತೊಂದರೆ ಕೊಡುತ್ತಿದ್ದಾರೆ. ಜೆಡಿಎಸ್ ಸದಸ್ಯರನ್ನ ಸೆಳೆಯಲು ಯತ್ನಿಸುತ್ತಿದ್ದಾರೆ. ಹೀಗಾಗಿ ಹೆಚ್.ಡಿ ಕುಮಾರಸ್ವಾಮಿ ಬಿಜೆಪಿಗೆ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ ಎಂದು ಹೊಸಬಾಂಬ್ ಸಿಡಿಸಿದ್ದಾರೆ. ರಾಮನಗರದಲ್ಲಿ ಜೆಡಿಎಸ್‌ ಪಕ್ಷದವರನ್ನ ಕಾಂಗ್ರೆಸ್‌ ಸೆಳೆಯುತ್ತಿದೆ. ರಾಮನಗರದಲ್ಲಿ ಡಿ.ಕೆ ಬ್ರದರ್ಸ್ ಹಾವಳಿ ಹೆಚ್ಚಾಗಿದೆ. ಹೀಗಾಗಿ ಡಿ.ಕೆ ಬ್ರದರ್ಸ್ ವಿರುದ್ದ ಹೆಚ್.ಡಿಕೆ ತಿರುಗಿ ಬಿದ್ದಿದ್ದಾರೆ ಎಂದು ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ. : – - – - –