ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಇಬ್ಬರು ಆರೋಪಿಗಳು ಅಂದರ್… ಮೈಸೂರು,ಜು,30,2020(..): ಯುವಕನನ್ನ ಕೊಲೆ ಮಾಡಿ ಪರಾರಿಯಾಗಿದ್ದ ಇಬ್ಬರು ಕೊಲೆ ಆರೋಪಿಗಳನ್ನ ಮೈಸೂರಿನ ಹೆಬ್ಬಾಳು ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಿರಣ್ (29), ದಿಲೀಪ್ (34) ಬಂಧಿತ ಆರೋಪಿಗಳು. ಇದೇ ಜುಲೈ 21ರಂದು ಹೆಬ್ಬಾಳು ಪೊಲೀಸ್ ಠಾಣೆ ವ್ಯಾಪ್ತಿಯ ತರಕಾರಿ ಮಾರುಕಟ್ಟೆಯಲ್ಲಿ ದರ್ಶನ್ (20) ಎಂಬಾತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಸಂಬಂಧ ಹೆಬ್ಬಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ‌ ತನಿಖೆ ಕೈಗೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. : - –- -