ತಿದ್ದುಪಡಿ ಅಧಿಸೂಚನೆ : ಗರಿಷ್ಠ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆ. ಬೆಂಗಳೂರು, ಸೆ,20,2024: (..) ಲೋಕಸೇವಾ ಆಯೋಗವು 2023-24ನೇ ಸಾಲಿನ ಗ್ರೂಪ್-ಸಿ ವೃಂದದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ‘ಪಂಚಾಯತಿ ಅಭಿವೃದ್ಧಿ ಅಧಿಕಾರಿ* ನೇಮಕ ಸಂಬಂಧ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ( ) ಗರಿಷ್ಠ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದೆ. ಈ ಬಗ್ಗೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್. ಕೆ ಪ್ರಕಟಣೆ ಹೊರಡಿಸಿದ್ದು ವಿವರ ಹೀಗಿದೆ.. ಹೈದ್ರಾಬಾದ್-ಕರ್ನಾಟಕ ಸ್ಥಳೀಯ ವೃಂದದ-97 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉಲ್ಲೇಖಿತ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಸದರಿ ಅಧಿಸೂಚನೆಯ ಕ್ರಮ ಸಂಖ್ಯೆ:13ರಲ್ಲಿ ಗರಿಷ್ಠ ವಯೋಮಿತಿಯನ್ನು ‘ಸಾಮಾನ್ಯ ಅರ್ಹತೆ, 35 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ- 38 ವರ್ಷಗಳು ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1- 40 ವರ್ಷಗಳು” ಎಂದು ನಿಗದಿಪಡಿಸಲಾಗಿತ್ತು. ಪ್ರಸ್ತುತ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 166 ಸೆನೆನಿ 2024, ದಿನಾಂಕ:10.09.2024ರಲ್ಲಿ, ಈ ಕೆಳಕಂಡಂತೆ ಆದೇಶ ಹೊರಡಿಸಲಾಗಿರುತ್ತದೆ. “ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ. ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ( ) ಗರಿಷ್ಠ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದೆ. ಮೇಲ್ಕಂಡ ಸರ್ಕಾರದ ಆದೇಶದನ್ವಯ ಸದರಿ ಹುದ್ದೆಗಳಿಗೆ ನಿಗದಿಪಡಿಸಲಾಗಿದ್ದ ವಯೋಮಿತಿಯನ್ನು ಕೆಳಕಂಡಂತೆ ಮಾರ್ಪಾಡು ಮಾಡಲಾಗಿದೆ. ವಯೋಮಿತಿ: ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ:03.10.2024ಕ್ಕೆ ಆಯಾ ಮೀಸಲಾತಿಗಳ ಮುಂದೆ ನಮೂದಿಸಿರುವ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು. ವಯೋಮಿತಿ, ವಯಸ್ಸು: ಸಾಮಾನ್ಯ ಅರ್ಹತೆ-ಗರಿಷ್ಠ ಕನಿಷ್ಠ-18 ವರ್ಷಗಳು ಗರಿಷ್ಠ 38 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ – ಗರಿಷ್ಠ41 ವರ್ಷಗಳು ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1- ಗರಿಷ್ಠ 43 ವರ್ಷಗಳು. ಸರ್ಕಾರದ ಮೇಲ್ಕಂಡ ಆದೇಶದ ಹಿನ್ನೆಲೆಯಲ್ಲಿ ಗ್ರೂಪ್-ಸಿ ವೃಂದದ ‘ಪಂಚಾಯತಿ ಅಭಿವೃದ್ಧಿ ಅಧಿಕಾರಿ’ ಹುದ್ದೆಗಳಿಗೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ( ) ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಅರ್ಹ ಅಭ್ಯರ್ಥಿಗಳು ದಿನಾಂಕ:18.09.2024 ರಿಂದ 03.10.2024ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ಕಲ್ಪಿಸಲಾಗಿರುತ್ತದೆ. ವಿಶೇಷ ಸೂಚನೆ:- : , , 03 , .