ಪೋಕ್ಸೋ ಪ್ರಕರಣ: ಜೈಲಿನಿಂದ ಮುರುಘಾಶ್ರೀ ಬಿಡುಗಡೆಗೆ ಕೋರ್ಟ್ ​ಆದೇಶ ಚಿತ್ರದುರ್ಗ,ಅಕ್ಟೋಬರ್​​​, 7,2024 (..):ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಚಿತ್ರದುರ್ಗದ ಮುರುಘಾಶ್ರೀ ಅವರನ್ನು ಬಿಡುಗಡೆಗೆ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಪ್ರಕರಣ ಸಂಬಂಧ ಈ ಹಿಂದೆ ಹೈಕೋರ್ಟ್ ಮುರುಘಾಶ್ರೀಗೆ ಜಾಮೀನು ನೀಡಿತ್ತು. ಆದರೆ, ಸಾಕ್ಷ್ಯ ವಿಚಾರಣೆ ನಡೆಸುವವರೆಗೆ ಬಂಧನದಲ್ಲಿಡಲು ಸುಪ್ರೀಂಕೋರ್ಟ್​ ಆದೇಶಿಸಿತ್ತು. ಇದೀಗ, ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮುರುಘಾಶ್ರಿ ಬಿಡುಗಡೆಗೆ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶವನ್ನು ಹೊರಡಿಸಿದೆ. ಸಂತ್ರಸ್ತೆಯರಿಬ್ಬರು ಸೇರಿದಂತೆ 12 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್​ ಜಾಮೀನಿನ ಆದೇಶದ ಪ್ರಕಾರ ಮುರುಘಾಶ್ರೀ ಬಿಡುಗಡೆಯಾಗಿದ್ದಾರೆ. : , , , ,