ರಸ್ತೆ ಬದಿ ನಿಂತಿದ್ದ ವೇಳೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸಾವು ಬೆಂಗಳೂರು, ಅಕ್ಟೋಬರ್, 7,2024 (..):ರಸ್ತೆ ಬದಿ ನಿಂತಿದ್ದ ಮಹಿಳೆ ಮೇಲೆ ವಿದ್ಯುತ್​ ತಂತಿ ತುಂಡಾಗಿ ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಚಿಕ್ಕನಹಳ್ಳಿ ಗ್ರಾಮದ ನಿವಾಸಿ ಮಂಜಮ್ಮ(50) ಮೃತಪಟ್ಟವರು. ಮಂಜಮ್ಮ ಮನೆ ಬಳಿ ನಿಂತಿದ್ದ ವೇಳೆ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಈ ದುರ್ಘಟನೆ ನಡೆದಿದೆ. ಮಂಜಮ್ಮ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : , , ,