ಕೊಡಗು ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರಿಗೆ ಕೊರೋನಾ ಸೋಂಕು: ಬೆಳಗಾವಿಯಲ್ಲಿ ಜಿಲ್ಲಾ ಸರ್ಜನ್ ಗೆ ಪಾಸಿಟಿವ್ ಕೊಡಗು/ಬೆಳಗಾವಿ,ಜು,29,2020(..): ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸೋಂಕಿನ ಪ್ರಮಾಣ ದಿನೇ ದಿನೇ ಏರಿಕೆಯಾಗುತ್ತಿದ್ದು, ಈ ನಡುವೆ ಕೊಡಗಿನಲ್ಲಿ ಒಂದೇ ಕುಟುಂಬದ ನಾಲ್ವರಿಗೆ ಕೊರೋನಾ ಸೋಂಕು ವಕ್ಕರಿಸಿದೆ. ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕುಟುಂಬವೊಂದರನಾಲ್ವರಿಗೆ ಹಾಗೂ ಮಡಿಕೇರಿಯ ಮೂವರಿಗೆ ಇಂದು ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಒಟ್ಟು ಇಂದು 7 ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 363ಕ್ಕೆ ಏರಿಕೆಯಾಗಿದೆ. ಬೆಳಗಾವಿಯಲ್ಲಿ ಜಿಲ್ಲಾ ಸರ್ಜನ್ ಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಬೆಳಗಾವಿಯ ಬಿಮ್ಸ್ ನಲ್ಲಿ ಇದುವರೆಗೆ 8 ವೈದ್ಯರು, ಇಬ್ಬರು ನರ್ಸ್ 4 ಜನ ಟೆಕ್ನೀಷಿಯನ್ ಗೆ ಕೊರೋನಾ ಸೋಂಕು ಪತ್ತೆಯಾಗಿದೆ. : - – - – .