ದೇಶದಲ್ಲಿ ಒಂದೇ ದಿನ 48,513 ಮಂದಿಗೆ ಕೊರೋನಾ ಪಾಸಿಟಿವ್: 768 ಮಂದಿ ಬಲಿ… ನವದೆಹಲಿ,ಜು,29,2020(..): ದೇಶದಲ್ಲಿ ಕೊರೋನಾ ಸೋಂಕಿತರ ಪ್ರಮಾಣ 15 ಲಕ್ಷ ಗಡಿ ದಾಟಿದೆ. ಒಂದೇ ದಿನ 48,513 ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಕಳೆದ 24 ಗಂಟೆಗಳಲ್ಲಿ 768 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದು ಒಟ್ಟು ಈವರೆಗೆ ದೇಶದಲ್ಲಿ 34,193 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯಲ್ಲಿ 48,513 ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 15,31669ಕ್ಕೆ ಏರಿಕೆಯಾಗಿದೆ. 15,31669 ಸೋಂಕಿತರ ಪೈಕಿ 988029 ಮಂದಿ ಕೊರೋನಾದಿಂದ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 509,447 ಕೊರೋನಾ ಸಕ್ರಿಯ ಪ್ರಕರಣಗಳಿವೆ. : – 48,513 – – .