ನಟಿ ಸುಧಾರಾಣಿ ಸೋದರನ ಪುತ್ರಿ ಚಿಕಿತ್ಸೆಗೆ ಪರದಾಟ ವಿಚಾರ: ನಿರ್ಲಕ್ಷ್ಯ ವಹಿಸಿದ ಆಸ್ಪತ್ರೆಯ ವಿರುದ್ದ ಶಿಸ್ತು ಕ್ರಮ- ಸಚಿವ ಸುಧಾಕರ್ … ಬೆಂಗಳೂರು,ಜು,28,2020(..): ನಟಿ ಸುಧಾರಾಣಿ ಸೋದರನ ಪುತ್ರಿಗೆ ಚಿಕತ್ಸೆಗೆ ಪರದಾಟ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ನಿರ್ಲಕ್ಷ್ಯ ವಹಿಸಿದ ಆಸ್ಪತ್ರೆ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ಸುಧಾಕರ್, ನಟಿ ಸುಧಾರಾಣಿ ಆರೋಗ್ಯ ಸಮಸ್ಯೆಯಿಂದ ಶೇಷಾದ್ರಿಪುರಂ ಅಪೋಲೊ ಆಸ್ಪತ್ರೆಗೆ ಬಂದರೂ ಚಿಕಿತ್ಸೆಗೆ ತಡ ಮಾಡಿದ್ದಾರೆ ಎಂಬ ಸುದ್ಧಿ ಮಾಧ್ಯಮಗಳಲ್ಲಿ ನೋಡಿದೆ. ಅವರಷ್ಟೆ ಅಲ್ಲ ಸಾಮಾನ್ಯ ವ್ಯಕ್ತಿ ಯಾರೇ ಆಗಲಿ ಚಿಕಿತ್ಸೆ ಸಿಗದೆ ಪರದಾಡಬಾರದು. ಆ ಖಾಸಗಿ ಆಸ್ಪತ್ರೆ ವಿರುದ್ದ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ನಟಿ ಸುಧಾರಾಣಿ ಅವರ ಸಹೋದರನ ಮಗಳಿಗೆ ಅನಾರೋಗ್ಯದಿಂದ ಆಸ್ಪತ್ರೆಗೆ ಕರೆತಂದು ಮನವಿ ಮಾಡಿದರೂ ಸಕಾಲಕ್ಕೆ ಚಿಕಿತ್ಸೆ ದೊರೆತಿಲ್ಲ. ಒಂದು ಗಂಟೆಗೂ ಅಧಿಕ ಕಾಲ ಆಸ್ಪತ್ರೆಯ ಗೇಟ್ ಬಳಿಯೇ ಸುಧಾರಾಣಿ ಕಾದಿದ್ದಾರೆ. ಆಸ್ಪತ್ರೆಯಲ್ಲಿ ಬೆಡ್, ವೆಂಟಿಲೇಟರ್ ಇಲ್ಲ ಎಂದು ಸಬೂಬು ಹೇಳಿದ ಖಾಸಗಿ ಆಸ್ಪತ್ರೆ ಸಿಬ್ಬಂದಿ ಪ್ರವೇಶವನ್ನೇ ನೀಡಿಲ್ಲ. ಈ ವೇಳೆ ಕೊನೆಗೆ ಸುಧಾರಾಣಿ ಪೊಲೀಸ್ ಆಯುಕ್ತರಿಗೆ ಫೋನ್ ಮಾಡಿದ್ದು ಬಳಿಕ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ. : – - - - – --