ಮೈಸೂರಿನಲ್ಲಿ ಎಂಎಲ್ ಸಿ ಹೆಚ್.ವಿಶ್ವನಾಥ್ ಜತೆ ಸಂವಾದ ಕಾರ್ಯಕ್ರಮ: ಹಿರಿಯ ಸಾಹಿತಿ ಸೇರಿ ಹಲವು ಗಣ್ಯರು ಭಾಗಿ… ಮೈಸೂರು,ಜು,28,2020(..): ಇತ್ತೀಚೆಗಷ್ಟೆ ಸಾಹಿತ್ಯ ಕ್ಷೇತ್ರದಿಂದ ಮೇಲ್ಮನೆ ಸದಸ್ಯರಾಗಿ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ನೇಮಕವಾಗಿದ್ದು ಈ ಹಿನ್ನೆಲೆ ಇಂದು ಅವರ ಜತೆ ಸಂವಾದ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿತ್ತು. ನಗರದ ಪತ್ರಕರ್ತರ ಭವನದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಂವಾದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಅಡಗೂರು ಹೆಚ್. ವಿಶ್ವನಾಥ್ ಅವರೊಂದಿಗೆ ಸಾಹಿತ್ಯಿಕ-ಸಾಂಸ್ಕೃತಿಕ ಸಂವಾದ ಹೆಸರಿನಡಿ ಸಂವಾದ ಕಾರ್ಯಕ್ರಮ ನಡೆಯಿತು. ಸಂವಾದ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ, ಹಿರಿಯ ಸಾಹಿತಿ ಡಾ.ಸಿ.ಪಿ. ಕೃಷ್ಣಕುಮಾರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಜೆ.ಲೋಕೇಶ್ ಬಾಬು ಸೇರಿದಂತೆ ಇನ್ನಿತರ ಗಣ್ಯರ ಉಪಸ್ಥಿತರಿದ್ದರು. : - –- . – -