ಬಿಜೆಪಿಯ 24 ಶಾಸಕರಿಗೆ ಭರ್ಜರಿ ಗಿಫ್ಟ್: ನಿಗಮ-ಮಂಡಳಿ ಅಧ್ಯಕ್ಷರಾಗಿ ನೇಮಕ… ಬೆಂಗಳೂರು,ಜು,27,2020(..): ಬಿಜೆಪಿ ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ ಸಂಭ್ರಮದಲ್ಲೇ ಬಿಜೆಪಿಯ 24 ಶಾಸಕರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಭರ್ಜರಿ ಗಿಫ್ಟ್ ನೀಡಿದ್ದಾರೆ. ಇಂದು ಸರ್ಕಾರದ ಒಂದು ವರ್ಷದ ಸಾಧನೆಯ ಪುಸ್ತಕ ಬಿಡುಗಡೆ ಮಾಢಿದ ಬೆನ್ನಲ್ಲೆ ರಾಜ್ಯ ಬಿಜೆಪಿಯ 24 ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ ಬಂಪರ್ ಗಿಫ್ಟ್ ನೀಡಿದ್ದಾರೆ. ಸಚಿವಕಾಂಕ್ಷಿಗಳಾಗಿದ್ದ ಹಲವು ಶಾಸಕರಿಗೆ ನಿಗಮಮಂಡಳಿ ಅಧ್ಯಕ್ಷ ಸ್ಥಾನ ಹಂಚುವ ಮೂಲಕ ಸಮಾಧಾನಪಡಿಸಲು ಸಿಎಂ ಬಿಎಸ್ ವೈ ಮುಂದಾಗಿದ್ದಾರೆ. 24 ಶಾಸಕರಿಗೆ ನೀಡಲಾಗಿರುವ ನಿಗಮ – ಮಂಡಳಿ ಅಧ್ಯಕ್ಷ ಸ್ಥಾನದ ಪಟ್ಟಿ ಹೀಗಿದೆ ನೋಡಿ… ಅರಗ ಜ್ಞಾನೇಂದ್ರ –ಕರ್ನಾಟಕ ಗೃಹ ಮಂಡಳಿ ಎಂ.ಚಂದ್ರಪ್ಪ – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ರಾಜು ಗೌಡ – ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಎಂ.ಪಿ.ಕುಮಾರಸ್ವಾಮಿ –ಕರ್ನಾಟಕ ಮಾರುಕಟ್ಟೆ ಕನ್ಸಲ್ಟೆಂಟ್ ಮತ್ತು ಏಜೆನ್ಸಿಸ್ ಲಿಮಿಟೆಂಡ್ ಎ ಎಸ್ ಪಾಟೀಲ್ ನಡಹಳ್ಳಿ –ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಶಿವನಗೌಡ ನಾಯಕ್ –ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಮೂಡಾಳ್ ವಿರೂಪಾಕ್ಷಪ್ಪ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಜಿ ಹೆಚ್ ತಿಪ್ಪಾರೆಡ್ಡಿ – ಡಿ.ದೇವರಾಜು ಅರಸ್ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ಪ್ರೀತಮ್ ಜಿ ಗೌಡ – ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಸಂಸ್ಥೆ ರಾಜಕುಮಾರ್ ಪಾಟೀಲ್ ತೇಲ್ಕೂರ್ – ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲಬುರ್ಗಿ. ಕಳಕಪ್ಪ ಗುರುಶಾಂತಪ್ಪ ಬಂಡಿ -ಕೆ ಎಸ್ ಎಸ್ ಐ ಡಿ ಸಿ ಪರಣ್ಣ ಈಶ್ವರಪ್ಪ ಮುನವಳ್ಳಿ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಸಿದ್ದು ಸವದಿ -ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ ಹೆಚ್ ಹಾಲಪ್ಪ -ಮೈಸೂರು ಸೇಲ್ಸ್ ಇಂಟರ್ ನ್ಯಾಶನಲ್ ಲಿಮಿಟೆಡ್() ಅಪ್ಪುಗೌಡ – ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ಕಲಬುರ್ಗಿ ಶಂಕರ್ ಪಾಟೀಲ್ ಮುನೇನಕೊಪ್ಪ – ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ಲಾಲಾಜಿ ಆರ್ ಮೆಂಡನ್ –ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಬಸವರಾಜ್ ದಡೇಸೂರು – ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಮಂಡಳಿ ಡಾ.ಎಸ್.ಶಿವರಾಜ್ ಪಾಟೀಲ್ – ಕರ್ನಾಟಕ ರಾಜ್ಯ ಜೈವಿಕ ಇಂದಧ ಅಭಿವೃದ್ಧಿ ಮಂಡಳಿ ಸಿಎಸ್ ನಿರಂಜನ್ ಕುಮಾರ್ -ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕ ನಿಗಮ ನಿಯಮಿತ. ಹೆಚ್ ನಾಗೇಶ್ – ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮ ನಿಯಮಮಿತ ಎಸ್ ವಿ ರಾಮಚಂದ್ರ – ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ ಓಲೇಕಾರ ನೆಹರು ಚನ್ನಬಸಪ್ಪ –ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತಿ ಐಹೊಳೆ ದುರ್ಯೋಧನ ಮಹಾಲಿಂಗಪ್ಪ– ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ : - 24 - – – - –