ಬಿಎಸ್ ವೈ ಸರ್ಕಾರಕ್ಕೆ ಒಂದು ವರ್ಷದ ಸಂಭ್ರಮ: ಪುಟಕ್ಕಿಟ್ಟ ಚಿನ್ನ ಸಾಧನೆಯ ಕಿರುಹೊತ್ತಿಗೆ ಬಿಡುಗಡೆ… ಬೆಂಗಳೂರು,ಜು,27,2020(..): ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಒಂದು ವರ್ಷದ ಸಂಭ್ರಮ. ಹೀಗಾಗಿ ಬಿಜೆಪಿ ಸರ್ಕಾರದ ಒಂದು ವರ್ಷದ ಸಾಧನೆಯ ಕಿರುಹೊತ್ತಿಗೆಯನ್ನ ಇಂದು ಬಿಡುಗಡೆ ಮಾಡಿದರು. ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ಕಾರದ ಒಂದು ವರ್ಷದ ಸಾಧನೆಯ ಕಿರುಹೊತ್ತಿಗೆ ಪುಟಕ್ಕಿಟ್ಟ ಚಿನ್ನ ಎಂಬ ಹೆಸರಿನ ಕಿರುಹೊತ್ತಿಗೆಯನ್ನ ಸಿಎಂ ಬಿಎಸ್ ಯಡಿಯೂರಪ್ಪ ಬಿಡುಗಡೆ ಮಾಡಿದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕಂದಾಯ ಸಚಿವ ಆರ್.ಅಶೋಕ್, ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೇರಿ ಹಲವರು ಉಪಸ್ಥಿತರಿದ್ದರು. ಇಂದು 12.30ಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಅರ್ಧ ಗಂಟೆಗಳ ಕಾಲ ಭಾಷಣ ಮಾಡಲಿದ್ದು, ಸರ್ಕಾರದ ಸಾಧನೆಗಳ ಬಗ್ಗೆ ಹೇಳುವ ಸಾಧ್ಯತೆ ಇದೆ. : - – - - –