ಪರೀಕ್ಷೆ ಮುಂದೂಡಿಕೆಗೆ ಆಗ್ರಹ: ಸಿಎಂ ಬಿಎಸ್ ವೈ ಮನೆಗೆ ಮುತ್ತಿಗೆ ಹಾಕಲು ಯತ್ನ… ಶಿವಮೊಗ್ಗ,ಜು,25,2020(..): ಪದವಿ ಮತ್ತು ಸಿಇಟಿ ಪರೀಕ್ಷೆಯನ್ನ ಮುಂದೂಡುವಂತೆ ಆಗ್ರಹಿಸಿ ಶಿವಮೊಗ್ಗದ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಎನ್ ಎಸ್ ಯು ಐ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು. ಶಿವಮೊಗ್ಗದ ವಿನೋಬಾನಗರ ಬಡಾವಣೆಯಲ್ಲಿರುವ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸದ ಬಳಿ ಜಮಾಯಿಸಿದ ಎನ್ ಎಸ್ ಯು ಐ ಕಾರ್ಯಕರ್ತರು ಪದವಿ ಮತ್ತು ಸಿಇಟಿ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಪಿಪಿಇ ಕಿಟ್ ಧರಿಸಿ ಧರಣಿ ನಡೆಸಿದ ಕಾರ್ಯಕರ್ತರು ಸಿಎಂ ಬಿಎಸ್ ವೈ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾನಿರತ 30ಕ್ಕೂ ಹೆಚ್ಚು ಕಾರ್ಯಕರ್ತರನ್ನ ವಶಕ್ಕೆ ಪಡೆದರು. : – -- - -