ದೇಶದಲ್ಲಿ ಒಂದೇ ದಿನ 48,916 ಮಂದಿಗೆ ಕೊರೋನಾ ಸೋಂಕು ಪತ್ತೆ… ನವದೆಹಲಿ,ಜು,25,2020(..): ದೇಶದಲ್ಲಿ ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಒಂದೇ ದಿನದಲ್ಲಿ 48,916 ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ 48,916 ಮಂದಿ ಕೊರೋನಾ ಸೋಂಕಿಗೆ ತುತ್ತಾದರೇ 757 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13,36,861ಕ್ಕೆ ಏರಿಕೆಯಾಗಿದೆ. ಇನ್ನು ಈವರೆಗೇ ಮಹಾಮಾರಿ ಕೊರೋನಾಗೆ ಒಟ್ಟು 31,358 ಮಂದಿ ಬಲಿಯಾಗಿದ್ದಾರೆ. ಇನ್ನು 13,36,861 ಮಂದಿ ಸೋಂಕಿತರ ಪೈಕಿ 8,49,431 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಪ್ರಸ್ತುತ 4,56,071 ಸಕ್ರಿಯ ಪ್ರಕರಣಗಳಿವೆ. : – 48,916 – – .