ಕೊರೋನಾ ರೋಗ ಲಕ್ಷಣ ಇಲ್ಲದವರು ಹೋಮ್ ಐಸೋಲೇಷನ್ ನಲ್ಲಿರಿ- ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮನವಿ… ಬೆಂಗಳೂರು,ಜು,25,2020(..): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹರಡುತ್ತಿರುವ ಕೊರೋನಾ ಸೋಂಕು ತಡೆಗಟ್ಟಲು ಸರ್ಕಾರ ಮತ್ತು ಬಿಬಿಎಂಪಿ ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು ಈ ನಡುವೆ ರೋಗ ಲಕ್ಷಣ ಇಲ್ಲದವರು ಮನೆಯಲ್ಲೇ ಹೋಂ ಐಸೋಲೇಷನ್ ನಲ್ಲಿರಿ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮನವಿ ಮಾಡಿದ್ದಾರೆ. ಟ್ವಿಟ್ಟರ್ ನಲ್ಲಿ ಟ್ವಿಟ್ ಮಾಡಿರುವ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಬೆಡ್ ಸಿಗದ ಹಿನ್ನೆಲೆ ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ರೋಗದ ಗುಣ ಲಕ್ಷಣ ಇಲ್ಲದವರು ಮನೆಯಲ್ಲೇ ಹೋಮ್ ಐಸೋಲೇಷನ್ ನಲ್ಲಿರಿ ಎಂದು ಮನವಿ ಮಾಡಿದ್ದಾರೆ. : - – - - .