ನನ್ನನ್ನು ಎನ್ ಕೌಂಟರ್ ಮಾಡುವುದಾಗಿ ಜೀವ ಬೆದರಿಕೆ ಪತ್ರ ಬಂದಿದೆ-ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿ,ಮಾರ್ಚ್,28,2024 (..):ನನಗೆ ಮತ್ತೊಂದು ಜೀವ ಬೆದರಿಕೆ ಪತ್ರ ಬಂದಿದ್ದು ಅದರಲ್ಲಿ ನನ್ನನ್ನು ಎನ್ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಇಂದು ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಗಲಭೆ ಸೃಷ್ಟಿ ಮಾಡಿ ಬಿಜೆಪಿಯವರು ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲುವ ಪ್ಲಾನ್ ಮಾಡುತ್ತಿದ್ದಾರೆ ಕಿಡಿಕಾರಿದ್ದಾರೆ. ನೀವೇ ಈ ಚುನಾವಣೆಯಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದೀರಿ. ಗೊಂದಲ ಸೃಷ್ಟಿಸಿ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿದ್ದೀರಿ. ಗಲಭೆ ಸೃಷ್ಟಿ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದರೂ ಚುನಾವಣೆ ಗೆಲ್ಲಬೇಕು ಎಂಬ ಪ್ಲಾನ್ ಮಾಡಿಕೊಂಡಿದ್ದಾರೆ. ನನಗೆ ಬೆದರಿಕೆ ಪತ್ರ ಬಂದಿದೆ. ಬೆದರಿಕೆ ಪತ್ರ ಫಿನ್​ಲ್ಯಾಂಡ್​ನಿಂದ ಬಂದಿದೆ. ನನ್ನನ್ನು ಎನ್ಕೌಂಟರ್ ಮಾಡುವುದು ಸತ್ಯ ಎಂದು ಬೆದರಿಕೆ ಹಾಕಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದರು. : , ,