ನಾಲ್ಕು ಸಿಬ್ಬಂದಿಗೆ ಕೊರೋನಾ ಸೋಂಕು ದೃಢ: ಪೊಲೀಸ್ ಠಾಣೆ ಸೀಲ್ ಡೌನ್… ಮೈಸೂರು,ಜು,24,2020(..): ಮಲ್ಲಿಗೆ ನಗರಿ ಮೈಸೂರಿನಲ್ಲಿ ಕೊರೋನಾ ವಾರಿಯರ್ಸ್ ಗಳಿಗೂ ಕೊರೋನಾ ಮಹಾಮಾರಿ ಹರಡುತ್ತಿದ್ದು, ನಗರದ ಮಂಡಿ ಮೊಹಲ್ಲಾ ಪೊಲೀಸ್ ಠಾಣೆಯ ನಾಲ್ಕು ಸಿಬ್ಬಂದಿಗಳಿಗೆ ಸೋಂಕು ದೃಢವಾಗಿದೆ. ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಮಂಡಿ ಮೊಹಲ್ಲಾ ಪೊಲೀಸ್ ಠಾಣೆ ಸೀಲ್ ಡೌನ್ ಮಾಡಿದ್ದಾರೆ. ಸೋಂಕಿತರ ಸಂಪರ್ಕದಲ್ಲಿದ್ದ 50 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ಕ್ವಾರಂಟೈನ್ ಮಾಡಲಾಗಿದೆ. ನಿನ್ನೆಯಷ್ಟೆ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿ ಓರ್ವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು ಈ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ನೂತನ ಕಟ್ಟಡವೂ ಕೂಡ ಸೀಲ್ ಡೌನ್ ಆಗಿತ್ತು. : - - – - .