ದೇಶದಲ್ಲಿ ಒಂದೇ ದಿನ 45,720 ಕೊರೋನಾ ಪ್ರಕರಣ ಪತ್ತೆ…. ನವದೆಹಲಿ,ಜು,23,2020(..): ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ದಿನೇ ದಿನೇ ಹೆಚ್ಚುತ್ತಿದ್ದು ಒಂದೇ ದಿನ 45,720 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಹಾಗೆಯೇ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,129 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಒಂದೇ ದಿನ 45,720 ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಈ ಮೂಲಕ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 4,26,167ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾಗೆ 29,861 ಮಂದಿ ಬಲಿಯಾಗಿದ್ದಾರೆ. 7,82,607 ಮಂದಿ ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ವಾರ್ಜ್ ಆಗಿದ್ದಾರೆ. ದೇಶದಲ್ಲಿ ಒಟ್ಟು 4,26,167 ಸಕ್ರಿಯ ಪ್ರಕರಣಗಳು ಇವೆ. : 45720 –- - -