ಹಾಸನದಲ್ಲಿ ಇಂದು 78 ಮಂದಿಗೆ ಕೊರೋನಾ ಸೋಂಕು ದೃಢ… ಹಾಸನ,ಜು,22,2020(..): ಹಾಸನ ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು ಜಿಲ್ಲೆಯಲ್ಲಿ ಇಂದು 78 ಮಂದಿಗೆ ಕೊರೋನಾ ಸೋಂಕಿರುವುದು ದೃಢಪಟ್ಟಿದೆ. ಈ ಕುರಿತು ಹಾಸನ ಜಿಲ್ಲಾಡಳಿತ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಜಿಲ್ಲೆಯಲ್ಲಿ ಹೊಸದಾಗಿ 78 ಜನರಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1,127ಕ್ಕೆ ಏರಿಕೆಯಾಗಿದೆ. ಇಂದು ಕೊರೋನಾಗೆ ಹಾಸನದಲ್ಲಿ ಇಬ್ಬರು ಬಲಿಯಾಗಿದ್ದು ಕೊರೋನಾಗೆ ಬಲಿಯಾದವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಹಾಸನದಲ್ಲಿ 33,ಅರಕಲಗೂಡು ತಾಲ್ಲೂಕಿನಲ್ಲಿ 10, ಅರಸೀಕೆರೆಯಲ್ಲಿ 15, ಆಲೂರಿನಲ್ಲಿ 02, ಬೇಲೂರು 5, ಚನ್ನರಾಯಪಟ್ಟಣ 6, ಹೊಳೆನರಸೀಪುರದಲ್ಲಿ 7 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇನ್ನು 1127 ಸೋಂಕಿತರ ಪೈಕಿ 611 ಜನರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 481 ಆಗಿದೆ. : - - 78 – -