ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಪ್ರವೇಶಾತಿಗಾಗಿ ಅರ್ಜಿ ವಿತರಣೆ: ಸಾಮಾಜಿಕ ಅಂತರ ಕಾಯ್ದುಕೊಂಡು ಅರ್ಜಿ ಸ್ವೀಕರಿಸುತ್ತಿರುವ ವಿದ್ಯಾರ್ಥಿನಿಯರು.. ಮೈಸೂರು,ಜು,21,2020(..): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಸೋಂಕು ಹೆಚ್ಚಾಗಿದ್ದು ಈ ನಡುವೆ ನಗರದ ಮಹಾರಾಣಿ ಕಾಲೇಜಿನಲ್ಲಿ ಪ್ರವೇಶಾತಿಗಾಗಿ ವಿದ್ಯಾರ್ಥಿನಿಯರು ಅರ್ಜಿ ಸ್ವೀಕರಿಸುತ್ತಿದ್ದಾರೆ. ಹುಣಸೂರು ರಸ್ತೆಯಲ್ಲಿರುವ ಮಹಾರಾಣಿ ಡಿಗ್ರಿ ಕಾಲೇಜಿನ 2020 – 21 ನೇ ಸಾಲಿನ ಪ್ರಥಮ ವರ್ಷದ ಬಿಕಾಂ, ಬಿಬಿಎ ಪ್ರವೇಶಾತಿಗೆ ಅರ್ಜಿ ವಿತರಣೆ ಮಾಡಲಾಗುತ್ತಿದೆ. ಹೀಗಾಗಿ ಸರದಿ ಸಾಲಿನಲ್ಲಿ ನಿಂತು ವಿದ್ಯಾರ್ಥಿನಿಯರು ಅರ್ಜಿ ಸ್ವೀಕರಿಸುತ್ತಿದ್ದಾರೆ. ಕಳೆದ ಒಂದು ವಾರದಿಂದಲೂ ಸಾಮಾಜಿಕ ಅಂತರ ಕಾಯ್ದುಕೊಂಡು ವಿದ್ಯಾರ್ಥಿನೀಯರು ಪಡೆಯುತ್ತಿದ್ದಾರೆ. ವಿದ್ಯಾರ್ಥಿನಿಯರಿಗೆ ಕಾಲೇಜು ಸಿಬ್ಬಂದಿ ಸ್ಯಾನಿಟೇಸರ್ ವ್ಯವಸ್ಥೆ ಮಾಡಿ ಅರ್ಜಿ ನೀಡುತ್ತಿದ್ದಾರೆ. ಈ ನಡುವೆ ಮೈಸೂರು ಜಿಲ್ಲೆಯಲ್ಲಿ ಕೊರೋನಾ ಪ್ರಕರಣ ಏರಿಕೆಯಾಗುತ್ತಿದ್ದು, ಕೊರೊನಾ ಭಯದಿಂದಲೇ ಕಾಲೇಜು ಸೇರಲು ವಿಧ್ಯಾರ್ಥಿನಿಯರು ಬರುತ್ತಿದ್ದಾರೆ. : –- .