ಸೇತುವೆಯಿಂದ ಹಾರಿ ದ್ವಿತೀಯ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು… ಮೈಸೂರು,ಜು,21,2020(..): ದ್ವಿತೀಯ ಪಿಯು ವಿಧ್ಯಾರ್ಥಿನಿ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕೆ.ಆರ್.ಎಸ್.ಬಳಿ ಇರುವ ಸಾಗರಕಟ್ಟೆ ಸೇತುವೆಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಗುಂಗ್ರಾಲ್ ಛತ್ರದ ನಿವಾಸಿ ಭಾವನ(17)ಆತ್ಮಹತ್ಯೆಗೆ ಶರಣಾದ ವಿಧ್ಯಾರ್ಥಿನಿ. ಭಾವನ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಫೇಲ್ ಆಗಿದ್ದಳು. ಈ ನಡುವೆ ಚಿಕ್ಕಪ್ಪನ ಮನೆಗೆ ಹೋಗಿ ಬರುವುದಾಗಿ ಹೇಳಿ ಮನೆ ಬಿಟ್ಟಿದ್ದಳು. ಆದರೆ ಸಂಜೆ ಸಾಗರಕಟ್ಟೆ ಹಿನ್ನೀರಿನಲ್ಲಿ ಭಾವನಳ ಮೃತದೇಹ ಪತ್ತೆಯಾಗಿದೆ. ಈ ಕುರಿತು ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - --