ನಾಳೆ ಸಾರ್ವಜನಿಕರೊಂದಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಡಿಯೋ ಸಂವಾದ…? ಬೆಂಗಳೂರು,ಜು,21,2020(..): ಸಿಎಂ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ರಚನೆಯಾಗಿದ್ದ ಸಮ್ಮಿಶ್ರ ಸರ್ಕಾರ ಪತನವಾಗಿ ಒಂದು ವರ್ಷವಾದ ಹಿನ್ನೆಲೆ ನಾಳೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಾರ್ವಜನಿಕರ ಜತೆ ವಿಡಿಯೋ ಸಂವಾದ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 2018ರ ವಿಧಾನಸಭೆ ಚುನಾವಣೆ ನಂತರ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಮಾಡಿಕೊಂಡು ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಹೆಚ್.ಡಿ ಕುಮಾರಸ್ವಾಮಿ ಸಿಎಂ ಆಗಿ ಸುಮಾರು ಒಂದು ವರ್ಷಕ್ಕೂ ಹೆಚ್ಚು ಕಾಲ ಅಧಿಕಾರ ನಡೆಸಿದ್ದರು. ನಂತರ 17 ಶಾಸಕರ ರಾಜೀನಾಮೆಯಿಂದಾಗಿ ಸಮ್ಮಿಶ್ರ ಸರ್ಕಾರ ಪತನಗೊಂಡು ಬಿಎಸ್ ಯತಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿತು. ಸಮ್ಮಿಶ್ರ ಸರ್ಕಾರ ಪತನವಾಗಿ ಒಂದು ವರ್ಷ ಹಿನ್ನೆಲೆ ನಾಳೆ ಸಾರ್ವಜನಿಕರೊಂದಿಗೆ ಹೆಚ್.ಡಿ ಕುಮಾರಸ್ವಾಮಿ ವಿಡಿಯೋ ಸಂವಾದ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ಇನ್ನು ಈ ವೇಳೆ ಬಿಜೆಪಿ ಸರ್ಕಾರದ ಕಾರ್ಯವೈಖರಿ ಮತ್ತು ಕೊರೋನಾ ಪರಿಸ್ಥಿತಿ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ. : - - – -.