ಕೊರೋನಾ ರಾಯಭಾರಿಯಾಗಿ ನಟ ರಮೇಶ್ ಅರವಿಂದ ನೇಮಕ… ಬೆಂಗಳೂರು,ಜು,20,2020(..): ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೊರೋನಾ ವೈರಸ್ ಆರ್ಭಟ ಹೆಚ್ಚಾಗಿದೆ. ಈ ಮಧ್ಯೆ ಬೆಂಗಳೂರಿನಲ್ಲಿ ಇತ್ತೀಚೆಗೆ ದಿನನಿತ್ಯ 2ಸಾವಿರಕ್ಕೂ ಹೆಚ್ಚು ಕೇಸ್ ಗಳು ಪತ್ತೆಯಾಗಿತ್ತಿದ್ದು ಸೋಂಕಿತರ ಸಂಖ್ಯೆ ಕಡಿಮೆ ಮಾಡಲು ಬಿಬಿಎಂಪಿ ಹರ ಸಾಹಸ ಪಡುತ್ತಿದೆ. ಈ ನಡುವೆ ಕೊರೋನಾ ರಾಯಭಾರಿಯಾಗಿ ನಟ ರಮೇಶ್ ಅರವಿಂದ್ ಅವರನ್ನ ನೇಮಿಸಿ ಬಿಬಿಎಂಪಿ ಆದೇಶಿಸಿದೆ. ಕೊರೋನಾ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನಟ ರಮೇಶ್ ಅರವಿಂದ್ ಅವರನ್ನ ಕೊರೋನಾ ರಾಯಭಾರಿಯನ್ನಾಗಿ ನೇಮಿಸಿದೆ. ಬೆಂಗಳೂರಿನಲ್ಲಿ ನಿನ್ನೆ 2156 ಕೊರೋನಾ ಪ್ರಕರಣಗಳು ಪತ್ತೆಯಾಗಿತ್ತು. ಕೊರೋನಾ ನಿಯಂತ್ರಣ ಸಂಬಂಧ ಸಂಜೆ ಬೆಂಗಳೂರು ಸಚಿವರ ಜತೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. : - - – -