ಜಯಚಾಮರಾಜೇಂದ್ರ ಒಡೆಯರ್ 101ನೇ ಜನ್ಮ ದಿನಾಚಾರಣೆ: ಸಂಸದ ಪ್ರತಾಪ್ ಸಿಂಹ ಭಾಗಿ… ಮೈಸೂರು,ಜು,18,2020(..): ಇಂದು ಅಭಿವೃದ್ಧಿ ಹರಿಕಾರ ಜಯಚಾಮರಾಜೇಂದ್ರ ಒಡೆಯರ್ ಅವರ 101 ನೇ ಜನ್ಮ ದಿನ ಆಚರಣೆಯಾಗಿದ್ದು, ಅರಮನೆ ಆಡಳಿತ ಮಂಡಳಿಯಿಂದ ಸರಳವಾಗಿ ಆಚರಣೆ ಮಾಡಲಾಯಿತು. ಅರಮನೆ ಆಡಳಿತ ಮಂಡಳಿಯ ಕಚೇರಿ ಮುಂಭಾಗದಲ್ಲಿ ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮ ದಿನಾಚಾರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಯಚಾಮರಾಜೇಂದ್ರ ಒಡೆಯರ್ ಅವರ ಭಾವ ಚಿತ್ರಕ್ಕೆ ಸಂಸದ ಪ್ರತಾಪ್ ಸಿಂಹ ಹಾಗೂ ಅರಮನೆ ಆಡಳಿತ ಮಂಡಳಿ ನಿರ್ದೇಶಕ ಸುಬ್ರಮಣ್ಯ ಪುಷ್ಪನಮನ ಸಲ್ಲಿಸಿದರು. ಕೊರೊನಾ ಹಿನ್ನೆಲೆಯಲ್ಲಿ ಅರಮನೆ ಆಡಳಿತ ಮಂಡಳಿಯಿಂದ ಸರಳವಾಗಿ ಜಯಂತಿ ಆಚರಣೆ ಮಾಡಲಾಯಿತು. : 101st - ---