‘ ’ : ವೆಂಟಿಲೇಟರ್ ಖರೀದಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಉತ್ತರ ನೀಡುವಂತೆ ಸಿಎಂಗೆ ಡಿ.ಕೆ ಶಿವಕುಮಾರ್ ಆಗ್ರಹ…. ಬೆಂಗಳೂರು,ಜು,18,2020(..): ವೆಂಟಿಲೇಟರ್ ಖರೀದಿಯಲ್ಲಿ ಬಿಜೆಪಿ ಸರಕಾರದ ಬ್ರಹ್ಮಾಂಡ ಭ್ರಷ್ಟಾಚಾರ ಇಲ್ಲಿ ಜಗಜ್ಜಾಹಿರಾಗಿದೆ , ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಉತ್ತರ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವಿಟ್ಟರ್ ನಲ್ಲಿ ಆಗ್ರಹಿಸಿದ್ದಾರೆ. ಈ ಕುರಿತು ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವೆಂಟಿಲೇಟರ್ ಖರೀದಿಯಲ್ಲಿ ಬಿಜೆಪಿ ಸರಕಾರದ ಬ್ರಹ್ಮಾಂಡ ಭ್ರಷ್ಟಾಚಾರ ಇಲ್ಲಿ ಜಗಜ್ಜಾಹಿರಾಗಿದೆ. ತಮಿಳುನಾಡು ಸರ್ಕಾರ ತಲಾ 4.78 ಲಕ್ಷ ರು.ಗೆ ಖರೀದಿಸಿದ ವೆಂಟಿಲೇಟರ್ ಗೆ ಕರ್ನಾಟಕ ಸರಕಾರ 18.20 ಲಕ್ಷ ರುಪಾಯಿ ಕೊಟ್ಟಿದೆ!! ಈ ‘ ’ ಬಗ್ಗೆ ಸಿಎಂ @ ಉತ್ತರ ಕೊಡಬೇಕಿದೆ ಎಂದು ಆಗ್ರಹಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದು ಹೀಗೆ… ‘ ’ . ₹4.78 , ₹18.20 ! @, . . ’ , . ! ‘ ಈ ಕುರಿತು ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿರುವ ಡಿ.ಕೆ ಶಿವಕುಮಾರ್, ವೆಂಟಿಲೇಟರ್ ಸಿಗದೆ ಕರ್ನಾಟಕದ ಕೊರೊನಾ ಸೋಂಕಿತರು ಸಾಯುತ್ತಿದ್ದಾರೆ. ಬಿಜೆಪಿ ಮಂತ್ರಿಗಳು ಪಿಪಿಇ ಕಿಟ್ ಗಳಿಂದ ಹಿಡಿದು ಬೆಡ್ ಗಳವರೆಗೂ ಎಲ್ಲ ಕೊರೊನಾ ಚಿಕಿತ್ಸೆ ಸಲಕರಣೆಗಳ ಖರೀದಿ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದಾರೆ. ಬಿಜೆಪಿ ಸರಕಾರ ಕೊರೊನಾ ಸಂಕಷ್ಟ ಸಂದರ್ಭವನ್ನೂ ಲೂಟಿ ಮಾಡಲು ಬಳಸಿಕೊಂಡಿದೆ ಎಂದು ಆರೋಪಿಸಿದ್ದಾರೆ. : –- – –- - –-