ಸಿಎಂ ಬಿಎಸ್ ಯಡಿಯೂರಪ್ಪ ಅವರ ಕೋವಿಡ್ -19 ಟೆಸ್ಟ್ ವರದಿ ಬಹಿರಂಗ…. ಬೆಂಗಳೂರು,ಜು,18,2020(..): ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕೋವಿಡ್ ಟೆಸ್ಟ್ ವರದಿ ಬಂದಿದ್ದು ಸಿಎಂ ಬಿಎಸ್ ವೈಗೆ ಕೋವಿಡ್-19 ಟೆಸ್ಟ್ ವರದಿಯಲ್ಲಿ ನೆಗೆಟಿವ್ ಬಂದಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಬ್ಬಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಬಿಎಸ್.ವೈ ಅವರಿಗೆ ಸೋಂಕು ಭೀತಿ ಎದುರಾಗಿತ್ತು. ಹೀಗಾಗಿ ಸಿಎಂ ಕೆಲ ದಿನಗಳ ಕಾಲ ಸೆಲ್ಫ ಹೋಂ ಕ್ವಾರಂಟೈನ್ ನಲ್ಲಿದ್ದರು. ಸೋಂಕು ಭೀತಿ ಹಿನ್ನೆಲೆಯಲ್ಲಿ ಸಿಎಂ ಕೂಡ ಕೊರೊನಾ ಟೆಸ್ಟ್ ಗೆ ಒಳಪಟ್ಟಿದ್ದರು. ಇದೀಗ ವರದಿ ಬಂದಿದ್ದು ಸಿಎಂ ಬಿಎಸ್ ಯಡಿಯೂರಪ್ಪಗೆ ವರದಿಯಲ್ಲಿ ನೆಗೆಟಿವ್ ಬಂದಿದೆ. ಇದರಿಂದಾಗಿ ಸಿಎಂ ಬಿಎಸ್ ವೈ ಹಾಗೂ ಅವರ ಜೊತೆ ಸಂಪರ್ಕಕ್ಕೆ ಬಂದಿದ್ದ ಅಧಿಕಾರಿಗಳು, ನಿವಾಸದ ಸಿಬ್ಬಂದಿ, ಹಾಗೂ ಕುಟುಂಬ ಸದಸ್ಯರು ನಿರಾಳರಾಗಿದ್ದಾರೆ. : - --19- -