ರಾಜಸ್ಥಾನದ ಇಂದಿನ ಬೆಳವಣಿಗೆಯ ಮಾದರಿಗೆ ನಾವೇ ಕಾರಣ: ‘ ’ ಎಂದ ಮಾಜಿ ಸಚಿವ ಹೆಚ್.ವಿಶ್ವನಾಥ್… ಮೈಸೂರು,ಜು,17,2020(..): ರಾಜಸ್ಥಾನ ರಾಜ್ಯ ರಾಜಕೀಯದಲ್ಲಿ ಹೈಡ್ರಾಮಾ ಸೃಷ್ಠಿಯಾಗಿ ಡಿಸಿಎಂ ಸ್ಥಾನದಿಂದ ಸಚಿನ್ ಪೈಲೆಟ್ ರನ್ನ ಉಚ್ಛಾಟನೆ ಮಾಡಲಾಗಿದೆ. ಅಲ್ಲಿನ ಸರ್ಕಾರದ ವಿರುದ್ದ ಬಂಡಾಯವೆದ್ದಿರುವ ಇಬ್ಬರು ಶಾಸಕರನ್ನ ಪಕ್ಷದಿಂದ ಅಮಾನತು ಮಾಡಿದ್ದು , ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಚಿವ ಹೆಚ್. ವಿಶ್ವನಾಥ್, ರಾಜಸ್ಥಾನದ ಇಂದಿನ ಬೆಳವಣಿಗೆಯ ಮಾದರಿಗೆ ನಾವೇ ಕಾರಣ. ನಮ್ಮ ಸಂಸ್ಕೃತಿಯಿಂದ ಇಷ್ಟೇಲ್ಲಾ ಬೆಳವಣಿಗೆ ಆಗ್ತಿದೆ. ಎಂದಿದ್ದಾರೆ. ಮೈಸೂರಿನಲ್ಲಿ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಹೆಚ್.ವಿಶ್ವನಾಥ್, ಆಡಳಿತ ಪಕ್ಷದ ವಿರುದ್ದ ಸೆಡ್ಡು ಹೊಡೆದಿದ್ದು ಮೊದಲು ಕರ್ನಾಟಕದಲ್ಲೇ. ಸಂವಿಧಾನದಲ್ಲಿ ಇಂತಹ ಸ್ವಾತಂತ್ರ್ಯ ಹೋರಾಟದ ಮಾದರಿಯ ಹೋರಾಟ ನಡೆಯಬೇಕು. ಇದರಿಂದ ಜನತಂತ್ರ ವ್ಯವಸ್ಥೆಗೆ ಒಂದು ಬೆಲೆ ಬರುತ್ತದೆ. ಒಬ್ಬ ಜನಪ್ರತಿನಿಧಿಯನ್ನ ಅಷ್ಟು ಸುಲಭವಾಗಿ ಕಡೆಗಣಿಸಬಾರದು. ಇತ್ತೀಚೆಗೆ ವಿರೋಧ ಪಕ್ಷದಿಂದ ಆಡಳಿತ ಪಕ್ಷಕ್ಕೆ ಯಾರೂ ಹೋಗುತ್ತಿಲ್ಲ. ಆಡಳಿತ ಪಕ್ಷದಿಂದಲೇ ವಿರೋಧ ಪಕ್ಷದ ಕಡೆಗೆ ಹೋಗ್ತಿದ್ದಾರೆ. ಅದು ಪಕ್ಷಾಂತವರಲ್ಲ ಅದು ಶಿಕ್ಷೆ ನೀಡುವಂತ ಅಪರಾಧವು ಅಲ್ಲ. ರಾಜಸ್ಥಾನದ ರಾಜಕೀಯ ಬೆಳವಣಿಗೆ ಬಗ್ಗೆ ದೇಶದ್ಯಾಂತ ಚರ್ಚೆ ಆಗಬೇಕು. ಸಂವಿಧಾನಕ್ಕೆ ಗೌರವ ನೀಡುವವರು ಈ ಬಗ್ಗೆ ಮಾತನಾಡಬೇಕು ಎಂದು ಹೇಳಿದರು. ಕಾಂಗ್ರೆಸ್‌ನಲ್ಲಿ ಯುವ ನಾಯಕತ್ವವನ್ನ ದಮನ ಮಾಡಲಾಗುತ್ತಿದೆ. ರಾಹುಲ್‌ಗಾಂಧಿ ವಯಸ್ಸಿನ ಯುವಕರನ್ನ ತುಳಿಯುವ ಕೆಲಸ ಆಗ್ತಿದೆ. ಮಧ್ಯಪ್ರದೇಶದಲ್ಲಿ ಸಿಂಧ್ಯಾ, ರಾಜಸ್ಥಾನದಲ್ಲಿ ಸಚಿನ್ ಪೈಲೆಟ್. ಈ ಎರಡು ಯುವಕರು ಜಾತ್ಯಾತೀತ ಮನಸ್ಥಿತಿ ಉಳ್ಳವರು. ಕಾಂಗ್ರೆಸ್‌ಗಾಗಿ ದುಡಿದವರು ಈ ಯುವಕರು. ಇವರನ್ನು ತುಳಿಯುವ ಕೆಲಸ ಕಾಂಗ್ರೆಸ್ ನಡೆದಿದೆ. ಅದಕ್ಕೆ ಅವರು ಸಿಡಿದ್ದೇದ್ದಿದ್ದಾರೆ. ಇಂತಹ ಪರಿಸ್ಥಿತಿಯಿಂದ ಕಾಂಗ್ರೆಸ್ ದೇಶದಲ್ಲಿ ಕ್ಷೀಣಿಸುತ್ತಿದೆ ಎಂದು ಹೆಚ್.ವಿಶ್ವನಾಥ್ ಟೀಕಿಸಿದರು. ಅಪ್ಪನೇ ರಾಷ್ಟ್ರಾಧ್ಯಕ್ಷ ಮಗನೇ ರಾಜ್ಯಾಧ್ಯಕ್ಷ: ‘ಕೈ’ ಜೆಡಿಎಸ್ ವಿರುದ್ದ ಕಿಡಿ… ಇದೇ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ದ ಹರಿಹಾಯ್ದ ಹೆಚ್.ವಿಶ್ವನಾಥ್, ಸಿದ್ದರಾಮಯ್ಯ 4 ಬಾರಿ ಪಕ್ಷಾಂತರ ಮಾಡಿದ್ದಾರೆ‌. ರಮೇಶ್ ಕುಮಾರ್ 10 ಬಾರಿ ಪಕ್ಷಾಂತರ ಮಾಡಿದ್ದಾರೆ. ಕುಮಾರಸ್ವಾಮಿ ಪಕ್ಷವನ್ನೇ ಪಕ್ಷಾಂತರ ಮಾಡಿದ್ದರು. ಇಂತವರೆಲ್ಲಾ ನಮ್ಮನ್ನ ಪಕ್ಷಾಂತರಿಗಳು ಎಂದು ಕರೆದರು. ಜೆಡಿಎಸ್ ಕಾಂಗ್ರೆಸ್‌ನಲ್ಲಿ ಇರೋದು ರಾಜಪ್ರಭುತ್ವ. ಅಪ್ಪನೇ ರಾಷ್ಟ್ರಾಧ್ಯಕ್ಷ ಮಗನೇ ರಾಜ್ಯಾಧ್ಯಕ್ಷ. ಎರಡು ಪಕ್ಷದ ರಾಜಪ್ರಭುತ್ವದ ವಿರುದ್ದವೇ ನಾವು ಸಿಡಿದ್ದೇದಿದ್ದು. ಈಗ ಅದು ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಮುಂದುವರೆದಿದೆ. ಪಕ್ಷಾಂತರ ನಿಷೇಧ ಕಾಯ್ದೆಯನ್ನ ಆಡಳಿತ ಪಕ್ಷದ ಸಿಎಂಗಳು ದುರ್ಬಳಕೆ ಮಾಡಿಕೊಳ್ತಿದ್ದಾರೆ. ಇದು ಸರ್ವಾಧಿಕಾರಿ ಧೋರಣೆ. ಈ ಬಗ್ಗೆ ದೇಶಾದ್ಯಂತ ಚರ್ಚೆ ಆಗಬೇಕು ಎಂದು ಆಗ್ರಹಿಸಿದರು. ಸಿದ್ಧರಾಮಯ್ಯನವರೇ ಇದು ಲೆಕ್ಕ ಕೇಳುವ ಸಮಯವಲ್ಲ… ಹಾಗೆಯೇ ಕೋವಿಡ್ ಕಿಟ್ ಖರೀದಿಯಲ್ಲಿ ಬಿಜೆಪಿ ಸರ್ಕಾರ ಅವ್ಯವಹಾರ ನಡೆಸಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯಗೆ ಟಾಂಗ್ ನೀಡಿರುವ ಮಾಜಿ ಸಚಿವ ಹೆಚ್.ವಿಶ್ವನಾಥ್, ಸಿದ್ದರಾಮಯ್ಯನವರೇ ಇದು ಲೆಕ್ಕ ಕೇಳುವ ಸಮಯವಲ್ಲ‌. ಲೆಕ್ಕ ಎಲ್ಲು ಹೋಗೋದಿಲ್ಲ. ಈಗ ಜನರ ರಕ್ಷಣೆ ಸರ್ಕಾರದ ಮೊದಲ ಆದ್ಯತೆ ನೀಡಬೇಕು ಎಂದರು. ಸಿದ್ದರಾಮಯ್ಯಗೆ ಸಹಕಾರ ಕೇಳೋದು ಮಾತ್ರ ಗೊತ್ತು ಕೊಡೋದು ಗೊತ್ತಿಲ್ಲ. ವಿರೋಧ ಪಕ್ಷವಾಗಿ ಆಡಳಿತ ಪಕ್ಷಕ್ಕೆ ಸಹಕಾರ ನೀಡಿ. ಹಾಸಿಗೆ ಇಲ್ಲ, ದಿಂಬಿಲ್ಲ ಎಂದು ಬಿಟ್ಟು ಕಾಂಗ್ರೆಸ್ ಕೋವಿಡ್ ಆಸ್ಪತ್ರೆ ಆರಂಭಿಸಿ. ಈ‌ ಮೂಲಕ ಜನರ ನೆರವಿಗೆ ಬನ್ನಿ. ಆಡಳಿತ ಪಕ್ಷ ವಿರೋಧ ಪಕ್ಷ ಎರಡು ಸೇರಿ ಪರಿಸ್ಥಿತಿ ನಿಬಾಯಿಸಬೇಕಿದೆ. ನೀವೂ ಜವಬ್ದಾರಿಯಿಂದ ವರ್ತಿಸುವುದು ಕಲಿಯಿರಿ. ಲೆಕ್ಕ ಕೇಳುವುದು ತಪ್ಪಲ್ಲ, ಆದರೆ ಈಗ ಅದು ಸಮಯವಲ್ಲ ಎಂದು ಸಲಹೆ ನೀಡಿದರು. : - .-- --