ದೇಶದಲ್ಲಿ ಒಂದೇ ದಿನ 34,956 ಮಂದಿಗೆ ವಕ್ಕರಿಸಿದ ಕೊರೋನಾ… ನವದೆಹಲಿ,ಜು,17,2020(..): ದೇಶದಾದ್ಯಂತ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡುಬರುತ್ತಿದ್ದು, ಒಂದೇ ದಿನ 34,956 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 10 ಲಕ್ಷದ ಗಡಿ ದಾಟಿದೆ. 24 ಗಂಟೆಗಳಲ್ಲಿ 34,956 ಕೊರೋನಾ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 10,03,832ಕ್ಕೆ ಏರಿಕೆಯಾಗಿದೆ. ಒಂದೇ ದಿನ 687 ಮಂದಿ ಕೊರೋನಾಗೆ ಬಲಿಯಾಗಿದ್ದು, ಈವರೆಗೆ ಬಲಿಯಾದವರ ಸಂಖ್ಯೆ 25,602ಕ್ಕೆ ತಲುಪಿದೆ. ಮತ್ತೊಂದೆಡೆ ನಿನ್ನೆ ಒಂದೇ ದಿನ 22987 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಗುಣಮುಖರಾದವರ ಸಂಖ್ಯೆ 6,35,757ಕ್ಕೆ ಏರಿಕೆಯಾಗಿದ್ದು, ಇನ್ನೂ ದೇಶದಲ್ಲಿ 3,42,473 ಸಕ್ರಿಯ ಪ್ರಕರಣಗಳಿವೆ. : - -34,956 – – .