ಮೈಸೂರಿನಲ್ಲಿ ಇಂದು 50ಕ್ಕೂ ಹೆಚ್ಚು ಕೊರೋನಾ ಪಾಸಿಟಿವ್ ಕೇಸ್…? ಮೈಸೂರು,ಜು,17,2020(..): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಳೆದ ಮೂರು ದಿನಗಳಿಂದ ಕೊರೋನಾ ಸೋಂಕಿತರ ಸಂಖ್ಯೆ ಶತಕ ಭಾರಿಸುತ್ತಿದ್ದು ಈ ನಡುವೆ ಇಂದು 50ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಸಾಧ್ಯತೆ ಇದೆ. ಮೈಸೂರಿನಲ್ಲಿ ಪೊಲೀಸರು, ವೈದ್ಯರು, ಶಿಕ್ಷಕರು ಸೇರಿದಂತೆ ಕೊರೊನಾ ವಾರಿಯರ್ಸ್‌ಗೆ ಸೋಂಕು ತಗುಲಿದ್ದು, ಈ ಮೂಲಕ ಕೊರೊನಾ ವಾರಿಯರ್ಸ್‌ಗಳ ಮನೆಯವರಿಗೂ ಮಹಾಮಾರಿ ಕೊರೋನಾ ವಕ್ಕರಿಸುತ್ತಿದೆ. ಇನ್ನು ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್‌ ಗೂ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಮೈಸೂರಿನ ನಂಜನಗೂಡು, ಹೆಚ್ ಡಿ ಕೋಟೆ, ಹುಣಸೂರು ಭಾಗದಲ್ಲಿ ಹೆಚ್ಚು ಪಾಸಿಟಿವ್ ಕೇಸ್ ದಾಖಲಾಗಿದ್ದು ಈ ಮೂಲಕ ಇಂದು ಕೊರೋನಾ ಸೋಂಕಿತರ ಸಂಖ್ಯೆ 50 ದಾಟಲಿದೆ. : - 50 - - – -.