ಕೋಲಾರ ಕ್ಷೇತ್ರಕ್ಕೆ ಮಲ್ಲೇಶ್ ಬಾಬು ಹೆಸರೇ ಅಂತಿಮವಲ್ಲ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ. ಬೆಂಗಳೂರು,ಮಾರ್ಚ್,27,2024(..):ಲೋಕಸಭೆ ಚುನಾವಣೆಗೆ ಕೋಲಾರ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು ಇದರ ಲಾಭ ಪಡೆಯಲು ಜೆಡಿಎಸ್ ಮುಂದಾಗಿದೆ. ಈ ಮಧ್ಯೆ ಕೋಲಾರ ಕ್ಷೇತ್ರಕ್ಕೆ ಮಲ್ಲೇಶ್ ಬಾಬು ಜೆಡಿಎಸ್ ಅಭ್ಯರ್ಥಿ ಎಂದು ನಿನ್ನೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಢರು ಘೋಷಣೆ ಮಾಡಿದ್ದರು. ಆದರೆ ಈಗ ಕೋಲಾರ ಕ್ಷೇತ್ರಕ್ಕೆ ಮಲ್ಲೇಶ್ ಬಾಬು ಅವರ ಹೆಸರೇ ಅಂತಿಮವಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ, ಹೆಚ್.ಡಿ ದೇವೇಗೌಡರು ತಮ್ಮ ಭಾವನೆ ಹೇಳಿದ್ದಾರೆ. ಅದೇ ಅಂತಿಮವಲ್ಲ. ಕೋಲಾರ ರಾಜಕೀಯವನ್ನ ಸೂಕ್ಷ್ಮವಾಗಿ ಗಮನಿಸಿದ್ದೇನೆ. ಕಾಂಗ್ರೆಸ್ ಬೆಳವಣಿಗೆ ನೋಡಿ ನಮ್ಮ ಅಭ್ಯರ್ಥಿ ಘೋಷಣೆ ಮಾಡುತ್ತೇವೆ. ಇವತ್ತು ಸಂಜೆ ಒಳಗೆ ಟಿಕೆಟ್ ಘೋಷಣೆ ಮಾಡುತ್ತೇವೆ ಎಂದು ಹೇಳಿದರು. : , , .