ದೇಶದಲ್ಲಿ ಒಂದೇ ದಿನ ದಾಖಲೆ ಪ್ರಮಾಣದ ಕೊರೋನಾ ಸೋಂಕು ಪ್ರಕರಣ ಪತ್ತೆ… ನವದೆಹಲಿ,ಜು,16,2020(..): ದೇಶದಲ್ಲಿ ಮಹಾಮಾರಿ ಕೊರೋನಾ ಸೋಂಕಿತರ ಪ್ರಮಾಣ ದಿನೇ ದಿನೇ ಹೆಚ್ಚುತ್ತಿದ್ದು, ದೇಶದಲ್ಲಿ ಒಂದೇ ದಿನದಲ್ಲಿ 32 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿದೆ. ಕಳೆದ 24 ಗಂಟೆಗಳಲ್ಲಿ 32,695 ಮಂದಿಗೆ ಕೊರೋನಾ ಸೋಂಕು ತಗುಲಿದ್ದು , ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9,70,169ಕ್ಕೆ ತಲುಪಿದೆ. ಒಂದೇ ದಿನದಲ್ಲಿ ಕೊರೋನಾಗೆ 606 ಮಂದಿ ಬಲಿಯಾಗಿದ್ದು, ಈವರೆಗೆ ಕೊರೋನಾಗೆ ಮೃತಪಟ್ಟವರ ಸಂಖ್ಯೆ 24,915ಕ್ಕೆ ಏರಿಕೆಯಾಗಿದೆ. 9,70,169 ಮಂದಿ ಸೋಂಕಿತರ ಪೈಕಿ 6,12,815 ಮಂದಿ ಕೊರೋನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ ದೇಶದಲ್ಲಿನ್ನೂ 3,31,146 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. : - - - -