ಲಾಕ್ ಡೌನ್ ಮುಗಿಯುವವರೆಗೆ ಇಲ್ಲ ಬೆಂಗಳೂರು-ಮೈಸೂರು ಬಸ್ ಸಂಚಾರ… ಮೈಸೂರು,ಜು,15,2020(..): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣ ಹೆಚ್ಚಾಗಿರುವ ಹಿನ್ನೆಲೆ ಒಂದು ವಾರ ಲಾಕ್ ಡೌನ್ ಮಾಡಲಾಗಿದ್ದು, ಈ ಹಿನ್ನೆಲೆ ಇಂದಿನಿಂದ ಮೈಸೂರು ಜಿಲ್ಲೆಯೊಳಗೆ ಮಾತ್ರ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ನಡೆಸಲಿವೆ. ಬೆಂಗಳೂರಿನಲ್ಲಿ ಲಾಕ್ ಡೌನ್ ಮುಗಿಯುವವರೆಗೂ ಬೆಂಗಳೂರು- ಮೈಸೂರು ನಡುವೆ ಬಸ್ ಸಂಚಾರ ಇರುವುದಿಲ್ಲ. ಮೈಸೂರು ಜಿಲ್ಲೆಯ ಲೋಕಲ್ ಟ್ರಿಪ್‌ಗಳನ್ನು ಮಾತ್ರ ನಡೆಸಲು ಸಾರಿಗೆ ಸಂಸ್ಥೆ ನಿರ್ಧಾರ ಮಾಡಿದೆ. ಇತರ ಜಿಲ್ಲೆಗಳಿಗೆ ಅಗತ್ಯ ಪ್ರಯಾಣಿಕರು ಬಂದರೆ ಮಾತ್ರ ಬಸ್ ಸೇವೆ ಒದಗಿಸಲಿದೆ. ಆದರೂ ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಿಂದ ಮೈಸೂರಿಗೆ ಬಸ್ ಸಂಚರಿಸುತ್ತಿದ್ದು, ಮಂಡ್ಯ ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ ಬಸ್‌ಗಳು ಬಂದು ಹೋಗುತ್ತಿವೆ. ಆದರೆ ಲಾಕ್ ಡೌನ್ ಹಿನ್ನೆಲೆ ಬೆಂಗಳೂರಿಗೆ ಮಾತ್ರ ಬಸ್ ಸಂಚಾರವಿರುವುದಿಲ್ಲ. : -- - –