ದೇಶದಲ್ಲಿ ಒಂದೇ ದಿನ 29,429 ಮಂದಿಗೆ ವಕ್ಕರಿಸಿದ ಮಹಾಮಾರಿ ಕೊರೋನಾ… ನವದೆಹಲಿ,ಜು,15,2020(..): ದೇಶಾದ್ಯಂತ ಕಿಲ್ಲರ್ ಕೊರೋನಾ ವೈರಸ್ ದಿನೇ ದಿನೇ ವ್ಯಾಪಕವಾಗಿ ಹರಡುತ್ತಿದ್ದು, ಒಂದೇ ದಿನ ದೇಶದಲ್ಲಿ 29,429 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ 29,429 ಮಂದಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 9,36,181 ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ ಕೊರೋನಾ ಸೋಂಕಿಗೆ 582 ಮಂದಿ ಬಲಿಯಾಗಿದ್ದಾರೆ. ಒಟ್ಟು ಈವರೆಗೆ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 24,309. 9,36,181 ಕೊರೋನಾ ಸೋಂಕಿತರ ಪೈಕಿ 5,92,032 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 3,19,840 ಕೊರೋನಾ ಸಕ್ರಿಯ ಪ್ರಕರಣಗಳಿವೆ. : -29,429 – – .