ಕೊಡಗಿನಲ್ಲಿ ಇಂದು ಇಬ್ಬರಿಗೆ ಕೊರೋನಾ ಸೋಂಕು ದೃಢ… ಕೊಡಗು,ಜು,15,2020(..): ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ದಿನೇ ದಿನೇ ಹೆಚ್ಚುತ್ತಿದ್ದು ಈ ನಡುವೆ ಕೊರೋನಾ ಪ್ರಕರಣ ಹೆಚ್ಚಾಗಿರುವ ಕೆಲ ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈ ನಡುವೆ ಇಂದು ಕೊಡಗು ಜಿಲ್ಲೆಯಲ್ಲಿ ಇಬ್ಬರಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ. 19 ವರ್ಷದ ಯುವತಿ ಮತ್ತು 65 ವರ್ಷದ ವೃದ್ಧನಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಕೊಡಗಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 219ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು ಮೂವರು ಕೊರೋನಾದಿಂದ ಮೃತಪಟ್ಟಿದ್ದಾರೆ. 87 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. : –- – -