ಮೈಸೂರು ಜಿಲ್ಲೆ ಸಂಪೂರ್ಣ ಲಾಕ್‌ ಡೌನ್ ಮಾಡಿ-ಸಿಎಂ ಬಿಎಸ್ ವೈಗೆ ಮಾಜಿ ಸಚಿವ ಸಾ.ರಾ ಮಹೇಶ್ ಮನವಿ… ಮೈಸೂರು,ಜು,15,2020(..): ಮೈಸೂರು ಜಿಲ್ಲೆಯಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚುತ್ತಿದೆ. ಇದನ್ನ ತಡೆಗಟ್ಟಲು ಮೈಸೂರು ಜಿಲ್ಲೆಯನ್ನ ಸಂಪೂರ್ಣ ಲಾಕ್ ಡೌನ್ ಮಾಡಿ ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಮಾಜಿ ಸಚಿವ ಸಾ.ರಾ ಮಹೇಶ್ ಆಗ್ರಹಿಸಿದ್ದಾರೆ. ಈ ಕುರಿತು ಸಿಎಂ ಬಿಎಸ್ ಯಡಿಯೂರಪ್ಪಗೆ ಪತ್ರ ಬರೆದಿರುವ ಶಾಸಕ ಸಾ.ರಾ ಮಹೇಶ್, ಜಿಲ್ಲೆಯಲ್ಲಿ ದಿನೇ ದಿನೇ ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಿದೆ. ಮೈಸೂರಿನಲ್ಲಿ ಸೋಂಕು ಸಮುದಾಯಕ್ಕೆ ವ್ಯಾಪಕವಾಗಿ ಹರಡುತ್ತಿದೆ. ಅಲ್ಲದೇ ಕೊರೋನಾ ಹೆಚ್ಚಳ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಯಲ್ಲಿ ಲಾಕ್‌ಡೌನ್ ಮಾಡಲಾಗಿದೆ. ಈ ನಡುವೆ ಜಿಲ್ಲೆಯಲ್ಲಿ ಹರಡುತ್ತಿರುವ ಸೋಂಕು ನಿಯಂತ್ರಣಕ್ಕೆ ಮೈಸೂರು ಜಿಲ್ಲೆ ಲಾಕ್‌ಡೌನ್ ಮಾಡಿ ಎಂದು ಮನವಿ ಮಾಡಿದ್ದಾರೆ. ಸಿಎಂ ಸೇರಿದಂತೆ ಕಂದಾಯ ಸಚಿವ ಆರ್.ಅಶೋಕ್ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ಗೂ ಶಾಸಕ ಸಾ.ರಾ ಮಹೇಶ್ ಪತ್ರ ಬರೆದು ಮನವಿ ಮಾಡಿದ್ದಾರೆ. ಮೈಸೂರಿನಲ್ಲಿ ಕಳೆದ ಎರಡು ದಿನದಿಂದ ಕೊರೋನಾ ಸೋಂಕಿತರ ಪ್ರಮಾಣ 100ರ ಗಡಿ ದಾಟುತ್ತಿದ್ದು ಜನತೆಯಲ್ಲಿ ಆತಂಕ ಸೃಷ್ಠಿಯಾಗಿದೆ. ಹೀಗಾಗಿ ಜಿಲ್ಲೆ ಸಂಪೂರ್ಣ ಲಾಕ್ ಡೌನ್ ಗೆ ಸಾ.ರಾ ಮಹೇಶ್ ಆಗ್ರಹಿಸಿದ್ದಾರೆ. : - –- - - . – .