ಕೊರೋನಾ ಹೆಚ್ಚಳ ಹಿನ್ನೆಲೆ: 14 ದಿನಗಳ ಕಾಲ ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳ ಬಂದ್ ಗೆ ನಿರ್ಧಾರ… ಉಡುಪಿ,ಜು,14,2020(..): ದಿನೇ ದಿನೇ ಕೊರೋನಾ ಹೆಚ್ಚಳವಾಗುತ್ತಿರುವ ಹಿನ್ನೆಲೆ 14 ದಿನಗಳ ಕಾಲ ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳನ್ನ ಬಂದ್ ಮಾಡಲು ನಿರ್ಧರಿಸಲಾಗಿದೆ. ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯಲ್ಲಿ ಜಿಲ್ಲೆಯ ಎಲ್ಲಾ ಶಾಸಕರು, ಅಧಿಕಾರಿಗಳು ಪಾಲ್ಗೊಂಡಿದ್ದರು. ಗುರುವಾರದಿಂದ ಮುಂದಿನ 14 ದಿನಗಳ ಕಾಲ ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳನ್ನು ಬಂದ್ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಉಡುಪಿ ಜಿಲ್ಲಾ ಗಡಿ ಭಾಗದಿಂದ ಹೊರಗೆ ಹೋಗುವವರಿಗೆ ಹಾಗೂ ಒಳಗೆ ಬರುವವರಿಗೆ ನಾಳೆ ರಾತ್ರಿ (ಬುಧವಾರ) 8:00ಗಂಟೆಯವರೆಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಆ ಬಳಿಕ ಜಿಲ್ಲೆಯ ಎಲ್ಲಾ ಗಡಿಗಳನ್ನು ಬಂದ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಆದೇಶದಂತೆ ಭಾನುವಾರ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಇರುತ್ತದೆ ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ. : - - – –- -14