ಅಧಿಕೃತ ಘೋಷಣೆಗೂ ಮುನ್ನವೇ ದ್ವಿತೀಯ ಪಿಯು ಫಲಿತಾಂಶ ಪ್ರಕಟ… ಬೆಂಗಳೂರು,ಜು,14,2020(..): ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು...inವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಬಹುದಾಗಿದೆ. ಅಧಿಕೃತ ಘೋಷಣೆಗೂ ಮೊದಲೇ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಿದೆ. ಇಂದು ಬೆಳಿಗ್ಗೆ 11.30ಕ್ಕೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸುವುದಾಗಿ ನಿನ್ನೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದರು. ದ್ವಿತೀಯ ಪಿಯುಸಿ ಪರೀಕ್ಷೆ ಬರೆದಂತ ಪ್ರತಿ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಫಲಿತಾಂಶದ ವಿವರ ಬರಲಿದೆ. ಫಲಿತಾಂಶಕ್ಕಾಗಿ ಯಾವುದೇ ವಿದ್ಯಾರ್ಥಿಗಳು ಶಾಲೆಯ ಬಳಿ ಹೋಗ ಕೂಡದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದರು. ರಾಜ್ಯದಲ್ಲಿ 6.7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. : - – – .