ಶಾಲಾ ವಿದ್ಯಾರ್ಥಿಗಳಿಗೆ ಆನ್’ಲೈನ್ ಶಿಕ್ಷಣಕ್ಕೆ ಅಸ್ತು ಎಂದ ಹೈಕೋರ್ಟ್: ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ಬೆಂಗಳೂರು,ಜು,8,2020(..):ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ನಿಷೇಧಿಸಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಆನ್ ಲೈನ್ ಶಿಕ್ಷಣಕ್ಕೆ ಹೈಕೋರ್ಟ್ ಅಸ್ತು ಎಂದಿದೆ. ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್ ಸಿ.ಜೆ ಎಎಸ್ ಓಕಾ ಅವರಿದ್ದ ಪೀಠ, ಆನ್ ಲೈನ್ ಶಿಕ್ಷಣ ವಿದ್ಯಾರ್ಥಿಗಳ ಮೂಲಭೂತ ಹಕ್ಕು. ಸರ್ಕಾರ ಮೂಲಭೂತಹಕ್ಕನ್ನ ನಿರ್ಬಂಧಿಸುವಂತಿಲ್ಲ ಎಂದು ಸರ್ಕಾರಕ್ಕೆ ಸೂಚನೆ ನೀಡಿದೆ. : – – .