ಶಾಲಾ-ಕಾಲೇಜುಗಳ ಪ್ರಾರಂಭ, ಆನ್ ಲೈನ್ ತರಗತಿ ವಿಚಾರ: ಮತ್ತೊಮ್ಮೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್.. ಬೆಂಗಳೂರು,ಜು,8,2020(..): ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಹೆಚ್ಚಾಗುತ್ತಿದೆ. ಈ ಹಿನ್ನೆಲೆ, ಆನ್ ಲೈನ್ ಶಿಕ್ಷಣ, ಶಾಲಾ-ಕಾಲೇಜುಗಳ ಆರಂಭ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ ಶಾಲಾ ಕಾಲೇಜುಗಳ ಪ್ರಾರಂಭ ಅಥವಾ ಆನ್‍ಲೈನ್ ತರಗತಿಗಳ ಬಗ್ಗೆ ಸರ್ಕಾರ ಅಥವಾ ಶಿಕ್ಷಣ ಇಲಾಖೆ ಯಾವುದೇ ನಿರ್ಧಾರ ಕೈಗೊಂಡಿಲ್ಲ, ಎಂಬುದನ್ನುಮತ್ತೊಮ್ಮೆಸ್ಪಷ್ಟಗೊಳಿಸುತ್ತಿದ್ದೇನೆ.‌ ಇದನ್ನು ನಾನು ಹಲವಾರು ಬಾರಿ ಸ್ಪಷ್ಟಪಡಿಸಿದ್ದೇನೆ. ಸರ್ಕಾರ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯಗಳನ್ನು ವಿದ್ಯಾರ್ಥಿಗಳು ಮತ್ತು ವಿದ್ಯಾರ್ಜನೆಯ ಪರ ಕೈಗೊಳ್ಳಲು ಸಮರ್ಥವಾಗಿದೆ ಮತ್ತು ಅಂಥ ನಿರ್ಣಯಗಳನ್ನು ಕೈಗೊಳ್ಳುತ್ತದೆ ಪಾಲಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಈ ಕುರಿತು ಯಾವುದೇ ಆತಂಕ ಅಥವಾ ಕಪೋಲ ಕಲ್ಪಿತ ಸುಳ್ಳು ಸುದ್ದಿಗಳಿಗೆ ಕಿವಿ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ. ಸರ್ಕಾರ ತಾನಾಗಿಯೇ ಯಾವುದೇ ನಿರ್ಣಯ ಅಧಿಕೃತವಾಗಿ ಪ್ರಕಟಿಸುವ ಮುನ್ನ ಮಾಧ್ಯಮದಲ್ಲಿ ಪ್ರಸಾರವಾಗುವ ಅಥವಾ ಪ್ರಕಟವಾಗುವ ಯಾವುದೇ ಸುದ್ದಿಯನ್ನು ನಿಜ ಎಂದು ನಂಬಬೇಡಿ. ತಜ್ಞರ ಸಮಿತಿ ವರದಿ ಅಥವಾ ಬೇರೆ ಬೇರೆ ಆಯಾಮಗಳಲ್ಲಿ ಸರ್ಕಾರದ ಹಂತದಲ್ಲಿ ನಡೆಯುವ ಚರ್ಚೆಗಳು ಎಂದಿಗೂ ಅಂತಿಮ ನಿರ್ಣಯವಾಗಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. : – -- - – .