ದೇಶದಲ್ಲಿ ಒಂದೇ ದಿನ 24,248 ಮಂದಿಗೆ ಕೊರೋನಾ ಪಾಸಿಟಿವ್… ನವದೆಹಲಿ,ಜು,6,2020(..): ದೇಶದಾದ್ಯಂತ ಮಾರಣಾಂತಿಕ ಕೊರೋನಾ ರಣಕೇಕೆ ಹಾಕುತ್ತಿದ್ದು ದೇಶದಲ್ಲಿ ಒಂದೇ ದಿನ 24,248 ಮಂದಿಗೆ ಕೊರೋನಾ ಸೋಂಕು ವಕ್ಕರಿಸಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಈ ಕುರಿತು ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 24,248 ಹೊಸ ಕೊರೋನಾ ಪ್ರಕರಣಗಳನ್ನು ಪತ್ತೆಯಾಗಿದೆ. ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 6,97,413ಕ್ಕೆ ಏರಿಕೆ ಆಗಿದೆ. ಇನ್ನು ಒಂದೇ ದಿನ ದೇಶದಲ್ಲಿ ಕೊರೋನಾಗೆ 525 ಮಂದಿ ಬಲಿಯಾಗಿದ್ದಾರೆ. ಈವರೆಗೆ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆ 19,693ಕ್ಕೆ ಏರಿಕೆ ಆಗಿದೆ. ಸದ್ಯ ದೇಶದಲ್ಲಿ 2,53,287 ಸಕ್ರಿಯ ಪ್ರಕರಣಗಳಿದ್ದು 4,24,433 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. : – 24,248 – – .