ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣಗೂ ಕರೋನಾ ಪಾಸಿಟಿವ್..? ರಾಮನಗರ,ಜು,4,2020(..): ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರಿಗೂ ಕೊರೋನಾ ಸೋಂಕು ಕಾಣಿಸಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಎಂಎಲ್ ಸಿ ಪುಟ್ಟಣ್ಣ ಅವರೇ ಫೇಸ್ ಬುಕ್ ನಲ್ಲಿ ತಿಳಿಸಿದ್ದಾರೆ. ಕಳೆದ ಮೂರು ದಿನಗಳಿಂದ ಪುಟ್ಟಣ್ಣ ಅವರಿಗೆ ಜ್ವರವಿತ್ತು. ಹೀಗಾಗಿ ಕ್ವಾರಂಟೈನ್ ನಲ್ಲಿದ್ದರು. ವರದಿಯಲ್ಲಿ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆ ನಿನ್ನೆಯೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಇನ್ನು ಎಂಎಲ್ ಸಿ ಪುಟ್ಟಣ್ಣ ಕೊರೋನಾದಿಂದ ಶೀಘ್ರ ಗುಣಮುಖರಾಗುವ ವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ. : - --