ನಾಳಿನ ಲಾಕ್ ಡೌನ್ ಬಗ್ಗೆ ಮಾಹಿತಿ ನೀಡಿದ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್…. ಬೆಂಗಳೂರು,ಜು,4,2020(..): ಕೊರೋನಾ ಮಹಾಮಾರಿ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ ವಿಕೆಂಡ್ ಭಾನುವಾರ ಲಾಕ್ ಡೌನ್ ಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು ಈ ಹಿನ್ನೆಲೆ ನಾಳೆ ಸಾರ್ವಜನಿಕರು ಅನಗತ್ಯವಾಗಿ ಓಡಾಡದಂತೆ ಬಿಬಿಎಂಪಿ ಆಯುಕ್ತ ಎಚ್ಚರಿಕೆ ನೀಡಿದ್ದಾರೆ. ನಾಳಿನ ಭಾನುವಾರದ ಲಾಕ್ ಡೌನ್ ಬಗ್ಗೆ ಮಾಹಿತಿ ನೀಡಿದ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್, ಇಂದು ಸಂಜೆ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆವರೆಗೆ ಲಾಕ್ ಡೌನ್ ಇರುತ್ತದೆ. ಈ ವೇಳೆ ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಶವಿರುತ್ತದೆ. ದಿನಸಿ, ಹಣ್ಣು, ತರಕಾರಿ ಮಾಂಸದಂಗಡಿ, ಔಷಧಿ ಮಳಿಗೆಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಆದರೆ ಸಾರ್ವಜನಿಕರು ಅನಗತ್ಯವಾಗಿ ಓಡಾಡಿದರೇ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುತ್ತಿರುವ ಹಿನ್ನೆಲೆ ಪ್ರತಿ ಭಾನುವಾರ ಲಾಕ್ ಡೌನ್ ಮತ್ತು ಸೋಮವಾರದಿಂದ ಶನಿವಾರವರೆಗೆ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ಕರ್ಫ್ಯೂ ಹೇರಲಾಗಿದೆ. : - - – - .