ದಕ್ಷಿಣ ಕನ್ನಡದಲ್ಲಿ ಕೊರೋನಾಗೆ ಮೂವರ ಸಾವು: ಹಾಸನದಲ್ಲೂ ಮಹಾಮಾರಿಗೆ ಓರ್ವ ವ್ಯಕ್ತಿ ಬಲಿ… ಮಂಗಳೂರು,ಜು,4,2020(..): ರಾಜ್ಯದಲ್ಲಿ ಕೊರೋನಾ ವೈರಸ್ ಗೆ ಬಲಿಯಾಗುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಮೂವರು ಕೊರೋನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌-19 ಸೋಂಕಿನಿಂದ ನಿನ್ನೆ ರಾತ್ರಿ ಒಬ್ಬರು ಮತ್ತು ಇಂದು ಬೆಳಿಗ್ಗೆ ಇಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾಗೆ ಸಾವನ್ನಪ್ಪಿದವರ ಸಂಖ್ಯೆ 22ಕ್ಕೇರಿದೆ. ಉಸಿರಾಟದ ತೀವ್ರ ತೊಂದರೆ ಎದುರಿಸುತ್ತಿದ್ದ ಸುಳ್ಯ ತಾಲ್ಲೂಕಿನ ನಿವೃತ್ತ ಶಿಕ್ಷಕಿಯೊಬ್ಬರು ಶುಕ್ರವಾರ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದಾರೆ. ಮೃತದೇಹದ ಗಂಟಲಿನ ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷಿಸಿದ್ದು, ಕೋವಿಡ್‌ ಸೋಂಕು ದೃಢಪಟ್ಟಿದೆ. ಇನ್ನು ಹಾಸನದಲ್ಲಿ ಇಂದು ಕೊರೋನಾ ಮಹಾಮಾರಿ ಓರ್ವ ವ್ಯಕ್ತಿಯನ್ನ ಬಲಿ ಪಡೆದಿದೆ. 38 ವರ್ಷದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಮೃತ ವ್ಯಕ್ತಿಗೆ ಕೊವೀಡ್ ಟೆಸ್ಟ್ ಮಾಡಲಾಗಿತ್ತು. ನಂತರ ವ್ಯಕ್ತಿಗೆ ಕೊರೋನಾ ಸೋಂಕಿರುವುದು ಪತ್ತೆಯಾಗಿದೆ. ಈ ಮೂಲಕ ಹಾಸನದಲ್ಲಿ ಮೃತರ ಸಂಖ್ಯೆ7ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಶಂಕರ ಮಠದ ನಿವಾಸಿ 60 ವರ್ಷದ ವೃದ್ಧ ಕೊರೋನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. : – – - –